12:59 AM Monday21 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ…

ಇತ್ತೀಚಿನ ಸುದ್ದಿ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನಲ್ಲಿ ಕೊಲಾಜ್ ಸ್ಪರ್ಧೆ

15/11/2022, 11:34

ಪುತ್ತೂರು(reporterkarnataka.com): ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಆಂಟಿ ಹ್ಯುಮನ್ ಟ್ರಾಫಿಕಿಂಗ್ ಕ್ಲಬ್ ಹಾಗೂ ಇಂಗ್ಲೀಷ್ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ಮಾನವ ಕಳ್ಳ ಸಾಗಣೆ ಮತ್ತು ಅದನ್ನು ತಡೆಗಟ್ಟುವ ಕ್ರಮಗಳ ವಿಷಯದ ಮೇಲೆ ಕೊಲ್ಯಾಜ್ ಸ್ಪರ್ಧೆಯನ್ನು ಆಯೋಜಿಸಲಾಯಿತು.

ಭಾರತೀಯ ದಂಡಸಂಹಿತೆಯ ಪ್ರಕಾರ ಶಿಕ್ಷಾರ್ಹ ಅಪರಾಧವಾದ ಮಾನವ ಕಳ್ಳಸಾಗಣೆ ಹಾಗೂ ಮಾನವ ತನ್ನ ಸಹಜೀವಿಗಳೊಡನೆ ನಡೆಸುವ ಅಮಾನವೀಯ ಕೃತ್ಯಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಸ್ಪರ್ಧೆಯನ್ನು ಉದ್ಘಾಟಿಸಿದ ಪ್ರಾಂಶುಪಾಲ ಡಾಅಂತೋನಿ ಪ್ರಕಾಶ್ ಮೊಂತೆರೋ, ಮಾತನಾಡಿ “ಮಾನವ ಕಳ್ಳ ಸಾಗಣೆಯು ಒಂದು ಜ್ವಲಂತ ಸಮಸ್ಯೆಯಾಗಿದೆ. ಇದನ್ನು ತಡೆಗಟ್ಟುವಲ್ಲಿ ವಿದ್ಯಾವಂತರಾದ ನಮ್ಮೆಲ್ಲರ ಪಾತ್ರ ಮಹತ್ವದ್ದಾಗಿದೆ, ನಾವು ಇಂತಹ ಸಮಸ್ಯೆಗಳ ಬಗ್ಗೆ ಎಚ್ಚೆತ್ತುಕೊಂಡು ಇತರರಲ್ಲೂ ಅರಿವು ಮೂಡಿಸಿದಲ್ಲಿ ಈ ನಮಸ್ಯೆಯನ್ನು ತಡೆಗಟ್ಟಬಹುದು” ಎಂದು ಹೇಳಿದರು. ವೇದಿಕೆಯಲ್ಲಿ ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ. ಗಣೇಶ್ ಭಟ್ ಹಾಗೂ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಯೋಜಕರೂ ಕಾಲೇಜಿನ ಉಪಪ್ರಾಂಶುಪಾಲರೂ ಆದ ಡಾ. ಎ.ಪಿ ರಾಧಾಕೃಷ್ಣ ಉಪಸ್ಥಿತರಿದ್ದರು.

ಕಾಲೇಜಿನ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಅನುಶ್ರೀ ಪ್ರಾರ್ಥಿಸಿದರು. ಕಾಲೇಜಿನ ಆಂಟಿ ಹ್ಯುಮನ್ ಟ್ರಾಫಿಟಿಂಗ್ ಕ್ಲಬ್‌ನ ಸದಸ್ಯ ಸಂಚಾಲಕಿ ಭಾರತಿ ಏಸ್. ರೈ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಹಮ್ಮದ್ ಆಶಿಕ್ ವಂದಿಸಿದರು. ಜೊತೆ ಕಾರ್ಯದರ್ಶಿ ಶಿವಾನಿ ಕಾರ್ಯಕ್ರಮ ನಿರೂಪಿಸಿದರು.

ಸ್ಪರ್ಧೆಯಲ್ಲಿ ತಲಾ ಆರು ಮಂದಿ ವಿದ್ಯಾರ್ಥಿಗಳನ್ನೊಳಗೊಂಡ 15 ತಂಡಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು