10:14 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

19ರಂದು ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ: ಅಗತ್ಯ ಸಿದ್ದತೆಗೆ ಉಸ್ತುವಾರಿ ಸಚಿವರ ಸೂಚನೆ

15/11/2022, 20:37

ಮಂಗಳೂರು(reporterkarnataka.com): 1837 ರಲ್ಲಿಯೇ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ರಣಕಹಳೆ ಮೊಳಗಿಸಿದ ಸ್ವಾತಂತ್ರ್ಯ ಸಮರ ವೀರ ಕೆದಂಬಾಡಿ ರಾಮಯ್ಯಗೌಡರ ಕಂಚಿನ ಪ್ರತಿಮೆಯ ಲೋಕಾರ್ಪಣೆ ಹಾಗೂ ವೇದಿಕೆ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿಯ ಸಹಭಾಗಿತ್ವದಲ್ಲಿ ವಿಜೃಂಭಣೆಯಿಂದ ನೆರವೇರಿಸಲಾಗುವುದು, ಅದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು
ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದರು.
ಅವರು ಮಂಗಳವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿಮ ಪ್ರತಿಮೆಯ ಲೋಕಾರ್ಪಣೆ ಕುರಿತಂತೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇದೇ ನ.19ರ ಶನಿವಾರದಂದು ಮಂಗಳೂರಿನ ಬಾವುಟಗುಡ್ಡೆಯಲ್ಲಿ ಕೆದಂಬಾಡಿ ರಾಮಯ್ಯಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆಯಾಗಲಿದೆ, ಮುಖ್ಯಮಂತ್ರಿಗಳು ಆಗಮಿಸುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಅಚ್ಚುಕಟ್ಟಾಗಿ ಜರುಗಬೇಕು. ಕನಿಷ್ಠ 25,000 ಜನರು ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆಗಳಿದ್ದು, ಸಂಬಂಧಿಸಿದ ಇಲಾಖೆಗಳು ಕೂಡಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ವೇದಿಕೆ ಸಿದ್ದತೆ, ಊಟೋಪಚಾರ, ಕುಡಿಯುವ ನೀರು, ಶೌಚಾಲಯ, ಸಾರಿಗೆ, ಆಮಂತ್ರಣ ಸೇರಿದಂತೆ ಇತರೆ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ಅವರು ಸೂಚಿಸಿದರು.

ಕೆದಂಬಾಡಿ ರಾಮಯ್ಯ ಗೌಡರ ಅಭಿಮಾನಿ ವರ್ಗ ದೊಡ್ಡದಿದೆ, ಅವರ ಹಾಗೂ ಅಮರ ಸುಳ್ಯ ಸಮರದ ಬಗ್ಗೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಯಕ್ಷ ರಂಗಾಯಣದಿಂದ ರಾಜ್ಯಾದ್ಯಂತ ನಾಟಕ ಪ್ರದರ್ಶನಗಳನ್ನು ಮಾಡಲಾಗಿದೆ ಎಂದರು.

ಮಂಗಳೂರು ಮೇಯರ್ ಜಯಾನಂದ ಅಂಚನ್, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಹಾಗೂ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ವೇದಿಕೆಯಲ್ಲಿದ್ದರು.
ಸ್ವಾತಂತ್ರ್ಯ ಹೋರಾಟಗಾರ ಶ್ರೀ ಕೆದಂಬಾಡಿ ರಾಮಯ್ಯಗೌಡರ ಸ್ಮಾರಕ ಉಸ್ತುವಾರಿ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.
.

ಇತ್ತೀಚಿನ ಸುದ್ದಿ

ಜಾಹೀರಾತು