ಇತ್ತೀಚಿನ ಸುದ್ದಿ
ನಂದಿನಿ ಹಾಲಿನ ದರ ಏರಿಕೆ ಕುರಿತು ಶೀಘ್ರ ತೀರ್ಮಾನ: ಮುಖ್ಯಮಂತ್ರಿ ಬೊಮ್ಮಾಯಿ
15/11/2022, 21:37

ಬೆಂಗಳೂರು(reporterkarnataka.com): ಹಾಲಿನ ದರ ಪರಿಷ್ಕರಣೆ ಬಗ್ಗೆ ಮಾಧ್ಯಮವರ ಜೊತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಳೆದ ಹಲವಾರು ತಿಂಗಳಿನಿಂದ ಚರ್ಚೆಯಾಗುತ್ತಿದ್ದು, ಈ ತಿಂಗಳ 20ನೇ ತಾರೀಖಿನ ನಂತರ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.