1:39 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ವಿಧಾನಸಭೆ ಚುನಾವಣೆ: ಕಾಂಗ್ರೆಸ್ ನಲ್ಲಿ 8 ಸಾವಿರ ಅರ್ಜಿ: ಮಂಗಳೂರು ಉತ್ತರದಿಂದ ಬಾವಾ, ದಕ್ಷಿಣದಿಂದ ಐವನ್ ಸಲ್ಲಿಕೆ

16/11/2022, 20:12

ಮಂಗಳೂರು(reporterkarnataka.com): ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ನಲ್ಲಿ ಆಕಾಂಕ್ಷಿಗಳ ಸಂಖ್ಯೆ ತೀವ್ರಗೊಂಡಿದ್ದು, ಇದುವರೆಗೆ 8 ಸಾವಿರಕ್ಕೂ ಹೆಚ್ಚು ಅರ್ಜಿ ಸಲ್ಲಿಕೆಯಾಗಿದೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೇವಲ 6 ತಿಂಗಳು ಬಾಕಿ ಉಳಿದಿದ್ದು, ಆಕಾಂಕ್ಷಿಗಳ ಸಂಖ್ಯೆ ದಿನ ಕಳೆದಂತೆ ವೃದ್ಧಿಯಾಗಲಾರಂಭಿಸಿದೆ. ಕಾಂಗ್ರೇಸ್ ನಲ್ಲಿ ಈಗಾಗಲೇ ಟಿಕೆಟ್ ಗಾಗಿ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಪಕ್ಷದ ಚುನಾವಣೆ ಟಿಕೆಟ್‌ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದ್ದು, ಇದೀಗ ಅರ್ಜಿ ಸಲ್ಲಿಸಲು ನಿಗದಿ ಮಾಡಲಾಗಿದ್ದ ಗಡುವನ್ನು ನವೆಂಬರ್ 21 ರವರೆಗೆ ವಿಸ್ತರಿಸಲಾಗಿದೆ.

ರಾಜ್ಯದ 224 ಕ್ಷೇತ್ರಗಳಿಗೆ 8000 ಅರ್ಜಿಗಳು ಸಲ್ಲಿಕೆಯಾಗಿದೆ. ಒಟ್ಟು 1150 ಅರ್ಜಿಗಳು ಆಕಾಂಕ್ಷಿಗಳು ಪಡೆದುಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ಐವನ್ ಡಿಸೋಜ ಮತ್ತು ಮಂಗಳೂರು ಉತ್ತರಕ್ಕೆ ಮೊಯಿದೀನ್‌ ಬಾವಾ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸುವಾಗ 2 ಲಕ್ಷ ರೂ. ವಾವತಿಸಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು