12:33 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮಂಗಳೂರು ಕೆನರಾ ಕಾಲೇಜು ವಾಣಿಜ್ಯ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಿಂದ ಮಕ್ಕಳ ದಿನಾಚರಣೆ

16/11/2022, 20:53

ಮಂಗಳೂರು(reporterlarnataka.com): ನಗರದ ಕೆನರಾ ಕಾಲೇಜಿನ 50ನೇ ವರ್ಷದ ಸುವರ್ಣ ಸಂಭ್ರಮದ ಪ್ರಯುಕ್ತ, ವಾಣಿಜ್ಯ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಿಂದ ಮಕ್ಕಳ ದಿನಾಚರಣೆಯ ಪ್ರಯುಕ್ತ ಬೊಕ್ಕಪಟ್ನದ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಅಗತ್ಯ ಕಲಿಕಾ ಸಾಮಗ್ರಿ ವಿತರಣಾ ಕಾರ್ಯಕ್ರಮವು ನಡೆಯಿತು.

ಪ್ರತಿಭಾನ್ವಿತ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ, ಪೆನ್ಸಿಲ್, ರಬ್ಬರ್ ಮುಂತಾದ ದೈನಂದಿನ ವಿದ್ಯಾಭ್ಯಾಸಕ್ಕೆ ಬೇಕಾದ ಅಗತ್ಯ ವಸ್ತುಗಳನ್ನು ಉಚಿತವಾಗಿ ವಿತರಣೆ ಮಾಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಇಂದಿನ ಮಕ್ಕಳೇ ಮುಂದಿನ ಭವ್ಯ ಭಾರತದ ಪ್ರಜೆಗಳು ಎಂಬಂತೆ ಪ್ರತಿ ಮಗುವು ದೇಶದ ಸರ್ವಶ್ರೇಷ್ಠ ಆಸ್ತಿ. ಕೆನರಾ ಕಾಲೇಜಿನ ಎಂ.ಕಾಂ ವಿಭಾಗದ ವಿದ್ಯಾರ್ಥಿಗಳು ಶಾಲಾ ಮಕ್ಕಳಿಗಾಗಿ ವಿವಿಧ ಮನರಂಜನಾ ಕ್ರೀಡೆಗಳನ್ನು ನಡೆಸಿ, ಬಹುಮಾನವನ್ನು ವಿತರಿಸಿ, ಸಿಹಿ ತಿಂಡಿಯನ್ನು ಹಂಚಲಾಯಿತು.

ಬೊಕ್ಕಪಟ್ನ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಡ್ರೆಸಿಲ್ಲ್ ಲಿಲ್ಲೀ ಮೆಂಜೀಝ್ ರವರು, ಶಿಕ್ಷಕರು, ಸರ್ವ ವಿದ್ಯಾರ್ಥಿಗಳು ಕಾಲೇಜಿನ ನಿಸ್ವಾರ್ಥ ಸೇವೆಗಾಗಿ ಅಭಿನಂದನೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಕೆನರಾ ವಾಣಿಜ್ಯ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು, ಸಂಚಾಲಕಿ ಶ್ರೀಮತಿ ಸ್ವಾತಿ ನಾಯಕ್, ಉಪನ್ಯಾಸಕರಾದ ಡಾ. ಪ್ರಶಾಂತ್ ಭಟ್, ಮೇಘ ರಾವ್, ಹರೀಶ್ ಪೈ ಉಪಸ್ಥಿತರಿದ್ದರು.
ವಿಶಾಲ್ ಕಾರ್ಯಕ್ರಮವನ್ನು ಸ್ವಾಗತಿಸಿ ನಿರೂಪಿಸಿದರು. ಶರಣ್ಯ ಪ್ರಸ್ತಾವನೆಗೈದರು. ಸ್ವಾತಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು