4:12 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಸರಕಾರ ಕಾರ್ಯಕ್ರಮವನ್ನು ಸಂಘದ ಕಾರ್ಯಕ್ರಮದಂತೆ ಬಿಜೆಪಿ ಮಾಡುತ್ತಿದೆ: ಮಾಜಿ ಸಚಿವ ರೈ ಆರೋಪ

17/11/2022, 23:20

ಮಂಗಳೂರು(reporterkarnataka.com): ರಾಜ್ಯ ಬಿಜೆಪಿ ಸರಕಾರ ಆಡಳಿತ ಯಂತ್ರವನ್ನು ದುರುಪಯೋಗ ಪಡಿಸುವ ಕೆಲಸ ಮಾಡುತ್ತಿದೆ. ಸರಕಾರಿ ಇಲಾಖೆ ಅಧಿಕಾರಿಗಳ ಮೂಲಕ ಒತ್ತಡ ತಂದು ಸರಕಾರಿ ಕಾರ್ಯಕ್ರಮವನ್ನು ಸಂಘದ ಕಾರ್ಯಕ್ರಮದಂತೆ ಮಾಡುತ್ತಿದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಬಿ. ರಮಾನಾಥ ರೈ ಆರೋಪಿಸಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೆಲವು ಅಂಗನವಾಡಿ ಕಾರ್ಯಕರ್ತರು ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ ಎನ್ನುವ ಕಾರಣಕ್ಕೆ ತರಾಟೆಗೆ ತೆಗೆದುಕೊಂಡಿದ್ದು ಸರಿಯಲ್ಲ ಎಂದರು.
ಇದಲ್ಲದೆ ಕನ್ನಡ ಶಾಲಾ ಮಕ್ಕಳ ಹಬ್ಬ ಎನ್ನುವ ಸರಕಾರಿ ಕಾರ್ಯಕ್ರಮವನ್ನು ಮಾಡಲಾಗಿದ್ದು, ಬಿಜೆಪಿಯ ಕೇಶವ ಸಂವರ್ಧನ ಸಮಿತಿ ಸಹಯೋಗದೊಂದಿಗೆ ಮಾಡಿದ್ದಾರೆ.

ಆರ್‌ಎಸ್‌ಎಸ್‌ನ ಸಂಘನಿಕೇತನದಲ್ಲಿ ಈ ಕಾರ್ಯಕ್ರಮವನ್ನು ಇಟ್ಟುಕೊಂಡಿದ್ದಾರೆ.

ಮಕ್ಕಳ ಪ್ರತಿಭಾ ಪ್ರದರ್ಶನ ಮಾಡಲು ಡಿಡಿಪಿಐ ಸುತ್ತೋಲೆ ಕಳುಹಿಸಿದ್ದಾರೆ. ಈ ಕಾರ್ಯಕ್ರಮವನ್ನು ಸರಕಾರಿ ಶಾಲೆಯಲ್ಲಿ ಮಾಡಬಹುದಾಗಿತ್ತಲ್ಲವೇ ಎಂದು ಪ್ರಶ್ನಿಸಿದರು.

ಇಲಾಖೆಯನ್ನು ಆಡಳಿತ ಯಂತ್ರವನ್ನು ದುರುಪಯೋಗವನ್ನು ಮಾಡುವುದನ್ನು ನಾವು ಬಿಡಲಾರೆವು ಎಂದರು.
ಸುದ್ದಿಗೋಷ್ಠಿಯಲ್ಲಿ ನಾಯಕರಾದ ಕೋಡಿಜಾಲ್ ಇಬ್ರಾಹಿಂ ಚಂದ್ರಪ್ರಕಾಶ್ ಶೆಟ್ಟಿ ಮೊದಲಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು