7:12 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಭಾರಿ ಪ್ರಮಾಣದ ಮಾದಕ ವಸ್ತು ಸಾಗಾಟ ಜಾಲ ಬಯಲು: 132 ಕೆಜಿ ಗಾಂಜಾ ವಶ; ಇಬ್ಬರು ಆರೋಪಿಗಳ ಸೆರೆ

18/11/2022, 20:14

ಮಂಗಳೂರು(reporter Karnataka.com): ಆಂಧ್ರ ಪ್ರದೇಶದ ವಿಶಾಖಪಟ್ಟಣದಿಂದ ಮಂಗಳೂರಿಗೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 132 ಕೆಜಿ ಗಾಂಜವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.


ಮಹೇಂದ್ರ XUV 500 ಕಾರಿನಲ್ಲಿ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡಲಾಗುತ್ತಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ
ಬಂಟ್ವಾಳ ತೌಡುಗೋಳಿ ನಿವಾಸಿ ರಮೀಝ್ ರಾಝ್(30) ಹಾಗೂ ಮಂಜೇಶ್ವರ ಮೀಯಪದವು ಮದಂಗಲ್ ಕಟ್ಟ ನಿವಾಸಿ ಅಬ್ದುಲ್ ಖಾದರ್ ಹ್ಯಾರಿಸ್(31) ಎಂಬವರನ್ನು ಮುಡಿಪು ಕುರ್ನಾಡು ಗ್ರಾಮದ ಕಾಯರ್ ಗೋಳಿ ಎಂಬಲ್ಲಿ ಬಂಧಿಸಲಾಗಿದೆ. ಗಾಂಜಾ ಸಾಗಾಟಕ್ಕೆ ಬಳಸಲಾದ
ಬಿಳಿ ಬಣ್ಣದ ಮಹೇಂದ್ರ XUV 500 ಕಾರು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳಿಂದ 132 ಕೆಜಿ ಗಾಂಜಾ, 2 ಮೊಬೈಲ್ ಫೋನ್ ಗಳನ್ನು, 3 ತಲವಾರು ಹಾಗೂ 2180 ರೂ. ನಗದು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಗಾಂಜಾ, ಮಹೇಂದ್ರ XUV 500 ಕಾರು, ಮೊಬೈಲ್ ಫೋನ್ ಗಳ ಒಟ್ಟು ಮೌಲ್ಯ ರೂ. 39,15,000/- ಆಗಿರುತ್ತದೆ. ಆರೋಪಿಗಳು ಗಾಂಜಾ ಸಾಗಾಟದ ಸಮಯದಲ್ಲಿ ಪೊಲೀಸರು ಅಥವಾ ಸಾರ್ವಜನಿಕರು ನಿಲ್ಲಿಸಿದ್ದಲ್ಲಿ, ಅವರಿಗೆ ತೊಂದರೆ ನೀಡುವ ಉದ್ದೇಶದಿಂದ ತಲವಾರುಗಳನ್ನು ಕಾರಿನಲ್ಲಿ ಇರಿಸಿದ್ದರು.ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.


ಆರೋಪಿಗಳ ಪೈಕಿ ರಮೀಝ್ ರಾಝ್ ಎಂಬಾತನ ವಿರುದ್ಧ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ದ್ರವ್ಯ ಸೇವನೆಗೆ ಸಂಬಂಧಪಟ್ಟಂತೆ ಒಂದು ಪ್ರಕರಣ, ಗಾಂಜಾ ಮಾರಾಟ ಮಾಡಿದ ಪ್ರಕರಣ, ಹಲ್ಲೆ ಪ್ರಕರಣ, ಹೀಗೆ ಒಟ್ಟು 3 ಪ್ರಕರಣ ದಾಖಲಾಗಿರುತ್ತದೆ. ಅಲ್ಲದೇ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟಕ್ಕೆ ಸಂಬಂಧಪಟ್ಟಂತೆ ಒಂದು ಪ್ರಕರಣ ಹಾಗೂ ಕೊಲೆ ಯತ್ನ ಪ್ರಕರಣ ಮತ್ತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟದ ಒಂದು ಪ್ರಕರಣ ಹೀಗೆ ಒಟ್ಟು 6 ಪ್ರಕರಣಗಳು ದಾಖಲಾಗಿರುತ್ತದೆ.
ಇನ್ನೋರ್ವ ಆರೋಪಿ ಅಬ್ದುಲ್ ಖಾದರ್ ಹ್ಯಾರಿಸ್ ಎಂಬಾತನ ವಿರುದ್ದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 2 ಕೊಲೆ ಯತ್ನ ಪ್ರಕರಣ ಹಾಗೂ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ 2 ಹಲ್ಲೆ ಪ್ರಕರಣಗಳು ದಾಖಲಾಗಿರುತ್ತದೆ.

ಈ ಬೃಹತ್ ಗಾಂಜಾ ಮಾರಾಟ/ಸಾಗಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಮಹೇಶ್ ಪ್ರಸಾದ್, ಪಿಎಸ್ಐ ರಾಜೇಂದ್ರ ಬಿ, ಎಎಸ್ಐ ಯವರಾದ ಶಶಿಧರ ಶೆಟ್ಟಿ, ಮೋಹನ್ ಕೆ ವಿ, ಹರೀಶ ಪಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು