8:56 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕೋಟ್ಯಂತರ ರೂಪಾಯಿ ವಂಚನೆ ಆರೋಪ:ಸಚಿವ ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ಬಂಧನ

02/07/2021, 12:21

ಬೆಂಗಳೂರು(reporterkarnataka news): ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ಅವರ ಬಂಧನವಾಗಿದೆ. ನೌಕರಿ ಕೊಡಿಸುವ, ವರ್ಗಾವಣೆ ಮಾಡಿಸುವ ನೆಪ ಹೇಳಿ ಕೋಟ್ಯಂತರ ರೂ. ವಂಚಿಸಿದ ಆರೋಪದ ಮೇಲೆ ಬಂಧನ ನಡೆದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ. ವೈ. ವಿಜಯೇಂದ್ರ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಬಂಧನ ನಡೆದಿದೆ.

ರಾಜಣ್ಣ ಅವರನ್ನು ಬೆಂಗಳೂರನಲ್ಲಿ ಸಚಿವ ಶ್ರೀರಾಮುಲು ಮನೆಯಿಂದ ಸಿಸಿಬಿ ತಂಡ ಬಂಧಿಸಿದೆ. ಸಚಿವರು ಕೂಡ ಆ ಸಂದರ್ಭದಲ್ಲಿ ಉಪಸ್ಥಿತರಿದ್ದರು ಎಂದು ತಿಳಿದು ಬಂದಿದೆ.

ರಾಜಣ್ಣ ಸಚಿವ ಶ್ರೀರಾಮುಲು ಜತೆಗೆ ವಿಜಯೇಂದ್ರ ಅವರ ಹೆಸರನ್ನು ಕೂಡ ದುರ್ಬಳಕೆ ಮಾಡುತ್ತಿದ್ದರು ಎಂಬ ದೂರಿನ ಹಿನ್ನೆಲೆಯಲ್ಲಿ ದಸ್ತಗಿರಿ ಮಾಡಲಾಗಿದೆ.

ರಾಜಣ್ಣ ನೌಕರಿ ಹಾಗೂ ಅಧಿಕಾರಿಗಳಿಗೆ ವರ್ಗಾವಣೆ ಆಮಿಷಯೊಡ್ಡಿ ಕೋಟ್ಯಂತರ ಹಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಎರಡು ದಿನಗಳ ಹಿಂದೆ ರಾಜಣ್ಣ ವಿರುದ್ಧ ಎಫ್‌ಐಆರ್​ ದಾಖಲಾಗಿತ್ತು. ಗುರುವಾರ  ಬೆಳಗ್ಗೆಯಿಂದ  ಸಿಸಿಬಿ ಪೊಲೀಸರು ಹೊಂಚು ಹಾಕಿ ಇಂದು ರಾಜಣ್ಣ ಅವರನ್ನು ಬಂಧಿಸಿದ್ದಾರೆ.

ರಾಜಣ್ಣ ಅವರು ಸಿಎಂ ಬಿಎಸ್​ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರ ಹೆಸರಲ್ಲಿಯೂ ಕೂಡ ವಂಚನೆ ಮಾಡಿದ್ದಾರೆ ಅನ್ನೋ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಖುದ್ದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೇ ರಾಮುಲು ಪಿಎ ವಿರುದ್ಧ ದೂರು ನೀಡಿದ್ದರು ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು