10:07 AM Thursday13 - November 2025
ಬ್ರೇಕಿಂಗ್ ನ್ಯೂಸ್
ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಇತ್ತೀಚಿನ ಸುದ್ದಿ

ಅರ್ಜಿ ವಿಲೇವಾರಿಗೆ ಸತಾಯಿಸಿದ ಸರ್ವೆ ಅಧಿಕಾರಿಗಳು: ಅರ್ಜಿದಾರನಿಂದ ಏಕಾಂಗಿ ಪ್ರತಿಭಟನೆ!

19/11/2022, 18:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕು ಕಚೇರಿಯಲ್ಲಿರುವ ಸರ್ವೆ ಇಲಾಖೆ ಅಧಿಕಾರಿಗಳು ತಮ್ಮ ಕೆಲಸ ಮಾಡಿಕೊಡದೇ ಸತಾಯಿಸುತ್ತಿದ್ದ ಹಿನ್ನಲೆಯಲ್ಲಿ ಅರ್ಜಿದಾರ ಶ್ರೇಷ್ಠಿ ಎಂಬುವರು ಶನಿವಾರ ಸರ್ವೇ ಇಲಾಖೆ ಮುಂದೆ ನಾಳೆ ಬಾ ಎಂಬ ನಾಮಫಲಕವನ್ನು ತನ್ನ ಶರ್ಟ್ನ ಹಿಂದೆ ಮುಂದೆ ಹಾಕಿಕೊಂಡು ವಿಭಿನ್ನ ರೀತಿಯಲ್ಲಿ ಏಕಾಂಗಿಯಾಗಿ ಪ್ರತಿಭಟಿಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಸ್ತಿ ವಿಭಾಗ ಪತ್ರಕ್ಕಾಗಿ ತಾನು ಸರ್ವೆ ಅಧಿಕಾರಿಗಳಿಗೆ ೧೬-೦೯-೨೦೨೨ರಂದು ಅರ್ಜಿ ಸಲ್ಲಿಸಿದ್ದೆ. ಲೆವೆನ್-ಇ ಸ್ಕೆಚ್ ಮಾಡಲು ೫ ನಿಮಿಷ ಸಾಕು. ಕ್ಯೋ ಕೋಡ್ ಸಂಖ್ಯೆ ಬರಲು ಒಂದು ದಿನ ಸಾಕು. ಈ ಕೆಲಸ ಮಾಡಿಕೊಡಲು ಕಳೆದ ೬೫ ದಿನದಿಂದ ಸತಾಯಿಸುತ್ತಿದ್ದಾರೆ. ಪ್ರತಿದಿನ ತಾಲೂಕು ಕಚೇರಿಗೆ ಅಲೆಯುವುದೇ ಕೆಲಸವಾಗಿಬಿಟ್ಟಿದೆ. ಅಲ್ಲದೇ ಈ ಕೆಲಸಕ್ಕಾಗಿ ಬೆಂಗಳೂರಿಗೆ ತೆರಳಿ ಕಮಿಷನರ್ ಅವರನ್ನೂ ಕೂಡ ಭೇಟಿ ಮಾಡಿ ಬಂದಿದ್ದೇನೆ.

ಆದರೂ ಯಾವುದೇ ಪ್ರಯೋಜನವಾಗಲಿಲ್ಲ. ತನ್ನ ಅರ್ಜಿ ವಿಲೆ ಬಗ್ಗೆ ಕಚೇರಿಗೆ ಬಂದಾಗ ಅಧಿಕಾರಿಗಳು ಸರಿಯಾದ ಮಾಹಿತಿ ಕೂಡ ನೀಡುತ್ತಿರಲಿಲ್ಲ. ಹಾಗಾಗಿ ದಿಕ್ಕು ತೋಚದೇ ಪ್ರತಿಭಟಿಸುವಂತಾಗಿದೆ. ಈಗ ಇಲ್ಲಿನ ಸರ್ವೇ ಅಧಿಕಾರಿಗಳು ತನ್ನ ಅರ್ಜಿ ಕೈಗೆತ್ತುಕೊಂಡು ಸೋಮವಾರ ವಿಲೇ ಮಾಡುವ ಭರವಸೆ ನೀಡಿದ್ದಾರೆ. ಸೋಮವಾರ ಕೂಡ ತನ್ನ ಕೆಲಸ ಆಗದಿದ್ದರೆ ಮತ್ತೆ ಪ್ರತಿಭಟನೆ ಮುಂದುವರೆಸುವುದಾಗಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು