9:25 AM Wednesday31 - December 2025
ಬ್ರೇಕಿಂಗ್ ನ್ಯೂಸ್
ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ

ಇತ್ತೀಚಿನ ಸುದ್ದಿ

ಜಪ್ಪಿನಮೊಗರು: ತಂದೆಯ ಪೆಟ್ರೋಲ್ ಬೆಂಕಿಗೆ ಆಸ್ಪತ್ರೆಗೆ ದಾಖಲಾಗಿದ್ದ 25ರ ಹರೆಯದ ಪುತ್ರ ಸಾವು

02/07/2021, 13:06

ಮಂಗಳೂರು(reporterkarnataka news); ಜನ್ಮ ಕೊಟ್ಟ ತಂದೆಯಿಂದಲೇ ಪೆಟ್ರೋಲ್ ನಿಂದ ಬೆಂಕಿ ಹಚ್ಚಲ್ಪಟ್ಟು ಸುಟ್ಟ ಗಾಯದೊಂದಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಸ್ಥಿತಿಯಲ್ಲಿದ್ದ ನತದೃಷ್ಟ ಪುತ್ರ ಸಾವನ್ನಪ್ಪಿದ್ದಾರೆ.

ನಗರದ ಹೊರವಲಯದ ಜಪ್ಪಿನಮೊಗರು ಕೊಪ್ಪರಿಗೆಗುತ್ತು ಎಂಬಲ್ಲಿ ಜೂ.21ರಂದು ರಾತ್ರಿ

ದನ ಕಟ್ಟುವ ವಿಚಾರದಲ್ಲಿ ಕೋಪಗೊಂಡ ವಿಶ್ವನಾಥ ಶೆಟ್ಟಿ ಅವರು ತನ್ನ ಪುತ್ರ ಸ್ವಾಮೀತ್ ಶೆಟ್ಟಿ(25) ಅವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ಇದರಿಂದ ಶರೀರದ ಮೇಲೆ ಸುಟ್ಟಗಾಯಗಳಾಗಿದ್ದವು. ಗಾಯಾಳುವನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ಆರೋಪಿ ತಂದೆಯನ್ನು ಪೊಲೀಸರು ಬಂಧಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸ್ವಾಮೀತ್ ಶೆಟ್ಟಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು