2:42 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಮಂಗಳೂರು ಸಹಿತ ರಾಜ್ಯದಲ್ಲಿ 6 ಹೊಸ ನಗರಗಳ ನಿರ್ಮಾಣ: ಟೆಕ್ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಘೋಷಣೆ

19/11/2022, 20:08

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಮಂಗಳೂರು ಸೇರಿದಂತೆ 6 ಹೊಸ ನಗರಗಳ ನಿರ್ಮಾಣ ಮಾಡಲಾಗುತ್ತಿದೆ. ಮಂಗಳೂರು, ಕಲಬುರಗಿ, ಹುಬ್ಬಳ್ಳಿ ಧಾರವಾಡ ಹಾಗೂ ಮೈಸೂರು ಸುತ್ತ ಹೊಸ ನಗರಗಳು ನಿರ್ಮಾಣವಾಗಲಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುಯಲ್ ಆಗಿ ಉದ್ಘಾಟಿಸಿದ, ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯುತ್ತಿರುವ 3 ದಿನಗಳ ಟೆಕ್ ಸಮ್ಮೇಳನ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬೆಂಗಳೂರಿನ ಪಕ್ಕ ಹೊಸ ನಗರ ನಿರ್ಮಾಣ ಮಾಡಲಾಗುತ್ತದೆ. ಜ್ಞಾನ, ವಿಜ್ಞಾನ ಹಾಗೂ ಟೆಕ್ ಸಿಟಿ ನಿರ್ಮಾಣ ಮಾಡಲಾಗುತ್ತಿದ್ದು, ಇದು ವಿಮಾನ ನಿಲ್ದಾಣಕ್ಕೆ ಹತ್ತಿರವಿರಲಿದೆ. 6 ತಿಂಗಳೊಳಗೆ ಈ ನಗರ ನಿರ್ಮಾಣದ ಬಗ್ಗೆ ಘೋಷಣೆ ಮಾಡಲಿದ್ದು, ಯೋಜನೆಯನ್ನು ರೂಪಿಸಲಾಗುವುದು. ಸ್ಟಾರ್ಟ್ ಅಪ್‌ಗಳನ್ನು ಪ್ರೋತ್ಸಾಹಿಸಲು ಅನೇಕ ಕಾರ್ಯಕ್ರಮಗಳಿದ್ದು, ಸರ್ಕಾರದ ವತಿಯಿಂದ ಇನ್ನಷ್ಟು ಕಾರ್ಯಕ್ರಮ ರೂಪಿಸಬೇಕಿದೆ. ಸ್ಟಾರ್ಟ್ ಅಪ್ ಪಾರ್ಕ್ ನಿರ್ಮಾಣಕ್ಕೆ ತೀರ್ಮಾನಿಸಿದ್ದು ಇದೂ ಕೂಡ 6 ತಿಂಗಳಲ್ಲಿ ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು