12:35 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ದಿನಾಚರಣೆ

20/11/2022, 14:42

ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜಿನ ಮಾನವಿಕ ಶಾಸ್ತ್ರ, ಇನ್ನೊವೇಶನ್‌ ಕೌನ್ಸಿಲ್ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶಗಳ ಸಹಯೋಗದಲ್ಲಿ ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ವಂ. ಡಾ. ಆಂಟನಿ ಪ್ರಕಾಶ್ ಮೊಂತೆರೂ ಅವರು ಕಾರ್ಯಕ್ರಮದ ಅಧ್ಯಕ್ಷರಾಗಿದ್ದರು. ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಅವರು ” ನಾವು ಕೇವಲ ಓದು ಬರಹ ಕಲಿತಾಗ ವಿದ್ಯಾವಂತರೆನಿಸುವದಿಲ್ಲ. ಪ್ರತಿಯೊಬ್ಬನ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣದ ಮುಖ್ಯ ಉದ್ದೇಶ: ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿದಿನವು ಶಿಕ್ಷಣ ದಿನವಾಗಿರುತ್ತದೆ” ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಉಜಿರೆಯ ಯಸ್ ಡಿ ಯಂ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಎಚ್.ಮಾಧವ ಭಟ್ ರವರು “ಮಾನವ ಸಂಪನ್ಮೂಲವು ಎಲ್ಲಾ ಸಂಪತ್ತುಗಳಿಗೂ ಮಿಗಿಲಾದುದು. ತಾನು ಕಲಿತ ವಿದ್ಯೆಯನ್ನು ಮುಂದಿನ ಪೀಳಿಗೆಗೆ ಹಂಚಲು ಮಾನವನಿಂದ ಮಾತ್ರ ಸಾಧ್ಯ. ಪ್ರಸಕ್ತ ತಂತ್ರಜ್ಞಾನದ ಯುಗದಲ್ಲಿ ಜ್ಞಾನವು ಯಾರ
ಸೊತ್ತೂ ಅಲ್ಲ, ಅದು ನಮ್ಮೆಲ್ಲರ ಬೆರಳ ತುದಿಯಲ್ಲೇ ಇದೆ. ನಮಗೆ ಕಲಿಯಬೇಕೆಂಬ ಅದಮ್ಯ ತುಡಿತವಿದ್ದರೆ ಮಾತ್ರ
ಸಾಧನೆ ಸಾಧ್ಯ” ಎಂದು ಹೇಳಿದರು.


ಹಿತಶ್ರೀ ಮತ್ತು ಬಳಗ ಪ್ರಾರ್ಥಿಸಿದರು. ಕಾಲೇಜಿನ ಇನೊವೇಶನ್‌ ‌ಕೌನ್ಸಿಲ್ ಅಧ್ಯಕ್ಷೆ ಗೀತಾ ಪೂರ್ಣಿಮಾ ಸ್ವಾಗತಿಸಿದರು. ಮಾನವಿಕ ಶಾಸ್ತ್ರದ ಮುಖ್ಯಸ್ಥ ಪ್ರೊ. ಸುಬೇರ್ ವಂದಿಸಿ, ವಿದ್ಯಾರ್ಥಿನಿ ವಿನ್ಯ ರೈ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು