3:49 PM Wednesday12 - November 2025
ಬ್ರೇಕಿಂಗ್ ನ್ಯೂಸ್
ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ

ಇತ್ತೀಚಿನ ಸುದ್ದಿ

ಶಹಬ್ಬಾಸ್ ಶಾಸಕರೇ..!: ಬೆಳಗಾವಿ ಸಂಬರಗಿ ಶಾಲೆಯಲ್ಲಿ ಹೆಣ್ಮಕ್ಕಳಿಗೆ, ಗಂಡು ಮಕ್ಕಳಿಗೆ ಒಂದೇ ಟಾಯ್ಲೆಟ್!

20/11/2022, 14:20

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದ ಶಾಲೆಯ ಅವ್ಯವಸ್ಥೆ ಹೇಳಿತೀರದು. ಶಾಲೆಯಲ್ಕಿ ಗಂಡು ಹಾಗೂ ಹೆಣ್ಣು ಮಕ್ಕಳಿಗೆ ಪ್ರತ್ತೇಕ ಶೌಚಾಲಯ ವ್ಯವಸ್ಥೆ ಇಲ್ಲ. ಒಂದೇ ಶೌಚಾಲಯವನ್ನು ಹೆಣ್ಮಕ್ಕಳು ಗಂಡು ಮಕ್ಕಳ ಜತೆ ಹಂಚಿಕೊಳ್ಳುವ ದುಸ್ಥಿತಿ ಬಂದಿದೆ.
ಇಲ್ಲೊಬ್ಬ ಮಹಾಶಯ ಮಾಡಿದ ಘನಂಧಾರಿ ಕೆಲಸದಿಂದ ಶಾಲಾ ಮಕ್ಕಳು ನರಕ ಯಾತನೆ ಅನುಭವಿಸುವಂತಾಗಿದೆ.

ಶಾಲಾ ಹೆಣ್ಣು- ಗಂಡು ಮಕ್ಕಳಿಗೆ ಒಂದೇ ಶೌಚಾಲಯ
ವ್ಯವಸ್ಥೆ ಮಾಡಿ ಸ್ಥಳೀಯರ ನಗೆ ಪಾಟಲಿಗೆ ಒಳಗಾಗಿದ್ದಾನೆ.
15ನೇ ಹಣಕಾಸಿನ ಯೋಜನೆ ಅಡಿಯಲ್ಲಿ ಜಿಲ್ಲಾ ಪಂಚಾಯತ್ ವತಿಯಿಂದ ಮಾಡಲಾದ ಶೌಚಾಲಯಕ್ಕೆ ಎತ್ತರದ ಸಿಂಕ್ ಅಳವಡಿಸಲಾಗಿ. ಇದರಿಂದ ಹೆಣ್ಮಕ್ಕಳಿಗೆ ತೊಂದರೆಯುಂಟಾಗಿ ಪೋಷಕರ ಕೆಂಗಣ್ಣಿಗೆ ಕಾರಣವಾಗಿದ್ದಾನೆ. ಹೆಣ್ಣು ಮಕ್ಕಳಿಗೆ ಶೌಚಕ್ಕೆ ಹೋಗಲು ಸಾಕಷ್ಟು ಸಮಸ್ಯೆಯಾಗುತ್ತಿದೆ. ಶಾಲಾ ಶಿಕ್ಷಕರು ಅಧಿಕಾರಿಗಳಿಗೆ ಮನವಿ ಮಾಡಿದರೂ ಕ್ಯಾರೇ ಅನ್ನದ ಅಧಿಕಾರಿಗಳು ಜಾಣ ಮೌನಕ್ಕೆ ಶರಣಾಗಿದ್ದಾರೆ.

ಬುದ್ದಿ ಎಲ್ಲಿಟ್ಟಿದ್ರಿ ಇಂಜಿನಿಯರ್ ಸಾಹೇಬ್ರೆ….ಎಂದು ಪೋಷಕರ ಆಕ್ರೋಶ ಹೊರ ಹಾಕುತಿದ್ದಾರೆ. ಅಷ್ಟೇ ಅಲ್ಲದೆ ಶಾಲಾ ಆವರಣದಲ್ಲಿ ಗ್ರಾಮ ಪಂಚಾಯತ್ ವತಿಯಿಂದ ನಡೆಯುತ್ತಿದ್ದ ಶಾಲಾ ಆವರಣ ಅಭಿವೃದ್ಧಿ ಕಾರ್ಯ ಅರ್ಧಕ್ಕೆ ನಿಂತಿದೆ. ಇದರಿಂದ ಮಕ್ಕಳ ಅಟೊಟಕ್ಕೆ ಸಮಸ್ಯೆ ಯಾಗುತ್ತಿದೆ.

ಇದರಿಂದ ರೋಸಿ ಹೋದ ಮಕ್ಕಳ ಪೋಷಕರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅಷ್ಟೇ ಅಲ್ಲದೆ ಮಕ್ಕಳ ಪ್ರಾಣಕ್ಕೆ ಸಂಚಾಕರ ತಂದೊಡ್ಡಬಲ್ಲ ಲೈಟ್ ಕಂಬ ಕೂಡ ಅವರಣದಲ್ಲೇ ಇದ್ದು ತೆರವಿಗೆ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು