ಇತ್ತೀಚಿನ ಸುದ್ದಿ
ಮಂಗಳೂರು ಆಟೋ ಸ್ಫೋಟ ಅನಿರೀಕ್ಷಿತವಲ್ಲ, ಉಗ್ರ ಕೃತ್ಯ: ಡಿಜಿಪಿ ಪ್ರವೀಣ್ ಸೂದ್
20/11/2022, 21:26

ಬೆಂಗಳೂರು(reporterkarnataka.com): ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ದಿಢೀರ್ ಅಂತ ನಿಗೂಢವಾಗಿ ಸಂಭವಿಸಿದ ಸ್ಫೋಟ ಅನಿರೀಕ್ಷಿತ ಅಲ್ಲ, ಇದೊಂದು ಉಗ್ರ ಕೃತ್ಯ ಎಂದು ಖಚಿತವಾಗಿದೆ ಎಂದು ಪೊಲೀಸ್ ಮಹಾ ನಿರ್ದೇಶಕ(ಡಿಜಿಪಿ- ಐಜಿಪಿ)ಪ್ರವೀಣ್ ಸೂದ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು ಮಾಹಿತಿ ನೀಡಿದ್ದಾರೆ.
ಘಟನೆ ಕುರಿತಂತೆ ಎಜಿಪಿ ಕರ್ನಾಟಕ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಡಿಜಿ- ಐಜಿಪಿ ಅವರು, ಘಟನೆ ಸಂಬಂಧ ಕರ್ನಾಟಕ ರಾಜ್ಯ ಪೊಲೀಸರು ಹಾಗೂ ಕೇಂದ್ರ ತನಿಖಾ ಸಂಸ್ಥೆಗಳ ಜತೆ ಸೂಕ್ಷ್ಮವಾಗಿ, ಆಳವಾಗಿ ತನಿಖೆ ನಡೆಸಲಾಗುತ್ತಿದೆ. ಸ್ಫೋಟ ಅನಿರೀಕ್ಷಿತವಾಗಿ ನಡೆದ ಘಟನೆ ಅಲ್ಲ. ಉದ್ದೇಶಪೂರ್ವಕವಾಗಿ ಸಾವು ನೋವು ಹಾನಿ ಉಂಟು ಮಾಡಲು ಪ್ಲಾನ್ ಮಾಡಿ ನಡೆಸಿರುವ ಉಗ್ರ ಕೃತ್ಯ ಎಂದು ಬರೆದುಕೊಂಡಿದ್ದಾರೆ.