3:19 PM Monday23 - December 2024
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಸಿ.ಟಿ. ರವಿಗೆ ಭಾರೀ ಸ್ವಾಗತ; ಮೆರವಣಿಗೆ ಸಿ. ಟಿ. ರವಿ ಸದಸ್ಯತ್ವ ಅನರ್ಹಗೊಳಿಸಿ: ಮಲೆನಾಡು ಪ್ರದೇಶಾಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ… ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ… ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು…

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ನಿವೃತ್ತ ಶಿಕ್ಷಕರಿಗೆ ಸನ್ಮಾನ

21/11/2022, 23:46

ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜಿನ ಸ್ಟಾಫ್ ಅಸೋಸಿಯೇಷನ್ ವತಿಯಿಂದ ತಮ್ಮ ವ್ಯಕ್ತಿಜೀವನದ 35 ವರ್ಷಗಳ ಸೇವೆಯನ್ನು ಪೂರ್ತಿಗೊಳಿಸಿ ನಿವೃತ್ತಿ ಹೊಂದಿರುವ ಕಾಲೇಜಿನ ಉಪಪ್ರಾಂಶುಪಾಲರೂ, ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರೂ ಆದ ಪ್ರೊ. ಉದಯ ಕೆ. ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಅತಿ ವಂ. ಲಾರೆನ್ಸ್ ಮಸ್ಕರೇನ್‌ರವರು ಶಿಸ್ತು, ಸಮಯ ಪರಿಪಾಲನೆ, ಕರ್ತವ್ಯನಿಷ್ಠೆ ಮುಂತಾದ ಗುಣಗಳೇ ಶಿಕ್ಷಕರನ್ನು ಬಹಳ ಎತ್ತರಕ್ಕೆ ಕೊಂಡೊಯ್ಯಬಲ್ಲವು. ತಮಗೆ ಸಿಕ್ಕಿದ ಸಮಯ ಮತ್ತು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳ ಪ್ರೀತಿಯನ್ನು ಗಳಿಸಿದ ಇವರ ಮುಂದಿನ ಜೀವನ ಸುಖ, ಶಾಂತಿ ಹಾಗೂ ನೆಮ್ಮದಿಯಿಂದ ಕೂಡಿರಲಿ” ಎಂದು ಹಾರೈಸಿದರು.


ಕಾಲೇಜಿನ ಪ್ರಾಂಶುಪಾಲರಾದ ವಂ, ಡಾ| ಆಂಟನಿ ಪ್ರಕಾಶ್ ಮೊಂತೆರೋ ಅವರು ಪ್ರೊ| ಉದಯರವರು ಸಂಸ್ಥೆಗೆ ಮಾಡಿರುವ ಸೇವೆಯನ್ನು ಪ್ರಶಂಸಿಸಿ ಅವರಿಗೆ ಶುಭಹಾರೈಸಿದರು.

ಕಾಲೇಜಿನ ಉಪಪ್ರಾಂಶುಪಾಲರೂ ಗಣಿತ ವಿಭಾಗದ ಮುಖ್ಯಸ್ಥರೂ ಆದ ಪ್ರೊ| ಗಣೇಶ್ ಭಟ್‌’ರವರು ಪ್ರೊ| ಉದಯರವರೊಂದಿಗಿನ ತಮ್ಮ ಒಡನಾಟದ ನೆನಪುಗಳನ್ನು ಹಂಚಿಕೊಂಡು ಸನ್ಮಾನಪತ್ರವನ್ನು ವಾಚಿಸಿದರು. ನಂತರ ಮಾತನಾಡಿದ ಪ್ರೊ| ಉದಯದವರು ತಮ್ಮ ಸುದೀರ್ಘ ವೃತ್ತಿಜೀವನದ ನೆನಪುಗಳನ್ನು ಹಂಚಿಕೊಂಡು ತಮ್ಮ ವೃತ್ತಿಜೀವನದುದ್ದಕ್ಕೂ ಮಾರ್ಗದರ್ಶನವಿತ್ತ ಪ್ರಾಂಶುಪಾಲರುಗಳು ಹಾಗೂ ಸಹೋದ್ಯೋಗಿಗಳಿಗೆ ಕೃತಜ್ಞತೆ ಅರ್ಪಿಸಿದರು.

ಸುರಕ್ಷಾ ಮತ್ತು ಬಳಗ ಪ್ರಾರ್ಥಿಸಿದರು. ಸ್ಟಾಫ್ ಅಸೋಸಿಯೇಶನ್‌ನ ಕಾರ್ಯದರ್ಶಿಯಾದ ಡಾ. ಡಿಂಪಲ್ ಫೆರ್ನಾಂಡಿಸ್ ಸ್ವಾಗತಿಸಿದರು. ಸ್ಟಾಫ್ ಅಸೋಸಿಯೆಶನ್‌ ಅಧ್ಯಕ್ಷರಾದ ಪ್ರೊ| ಸುಬೈ‌ರ್ ವಂದಿಸಿದರು. ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಹರ್ಷಿತ್‌ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ| ಎ. ಪಿ. ರಾಧಾಕೃಷ್ಣ ಹಾಗೂ ಕ್ಯಾಂಪ‌ ನಿರ್ದೇಶಕರಾದ ವಂ| ಸ್ಟ್ಯಾನಿ ಪಿಂಟೋ ವೇದಿಕೆಯಲ್ಲಿ ಉ ಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು