4:22 AM Sunday10 - May 2026
ಬ್ರೇಕಿಂಗ್ ನ್ಯೂಸ್
ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಇನ್ನಿಲ್ಲ: ಅನಾರೋಗ್ಯದಿಂದ ನಿಧನ ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ

ಇತ್ತೀಚಿನ ಸುದ್ದಿ

ಇಬ್ಬರು ಬ್ಯಾಗ್ ನೊಂದಿಗೆ ಓಡಾಡುತ್ತಿರುವ ವೀಡಿಯೋಗೂ ಆಟೋ ಸ್ಫೋಟಕ್ಕೂ ಸಂಬಂಧವಿಲ್ಲ: ಪೊಲೀಸ್ ಕಮಿಷನರ್ ಸ್ಪಷ್ಟನೆ

22/11/2022, 23:15

ಮಂಗಳೂರು(reporterkarnataka com): ಇಬ್ಬರು ವ್ಯಕ್ತಿಗಳು ಬ್ಯಾಗ್ ಹಿಡಿದು ಓಡಾಡುತ್ತಿರುವ ದೃಶ್ಯಕ್ಕೂ ನಾಗೂರಿಯಲ್ಲಿ ನಡೆದ ಆಟೋರಿಕ್ಷಾ ಸ್ಫೋಟ ಪ್ರಕರಣಕ್ಕೂ ಸಂಬಂಧವಿಲ್ಲ ಎಂದು ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಸ್ಪಷ್ಟಪಡಿಸಿದ್ದಾರೆ.

ವಿಡಿಯೋವೊಂದರಲ್ಲಿ ಇಬ್ಬರು ವ್ಯಕ್ತಿಗಳು ಬ್ಯಾಗ್‌ನೊಂದಿಗೆ ಓಡಾಡುತ್ತಿರುವ ದೃಶ್ಯವಿದ್ದು, ಮಂಗಳೂರು ನಗರದಲ್ಲಿ ನಡೆದ ಸ್ಟೋಟ ಪ್ರಕರಣದಲ್ಲಿ ಭಾಗಿಯಾಗಿರುತ್ತಾರೆ ಎಂಬುದಾಗಿ ಸುದ್ದಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಕಮಿಷನರ್ ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ‌ಇಬ್ಬರು ವ್ಯಕ್ತಿಗಳು ಓಡಾಡುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅದನ್ನು ಸ್ಪೋಟ ಪ್ರಕರಣದ ಆರೋಪಿ ಮತ್ತು ಆತನೊಂದಿಗೆ ಇನ್ನೊಬ್ಬ ವ್ಯಕ್ತಿ ಇದ್ದ ಎಂಬಂತೆ ಬಿಂಬಿಸಲಾಗುತ್ತಿದೆ. ಆದರೆ ಅಸಲಿಗೆ ಆ ವೀಡಿಯೋಗೂ, ಘಟನೆಗೂ ಯಾವುದೇ ಸಂಬಂಧವಿಲ್ಲ. ಅದು ರೈಲು ನಿಲ್ದಾಣದ ಬಳಿಯ ಸ್ಥಳವಾದ್ದರಿಂದ ಯಾರೋ ಪ್ರಯಾಣಿಕರು ಓಡಾಡುತ್ತಿರುವುದನ್ನು ಘಟನೆಯೊಂದಿಗೆ ತಳುಕು ಹಾಕಲಾಗುತ್ತಿದೆ. ಇದು ಸೂಕ್ಷ್ಮ ವಿಚಾರವಾಗಿರುವುದರಿಂದ ಸಾರ್ವಜನಿಕರು ಪರಿಶೀಲಿಸದ ಇಂತಹ ವೀಡಿಯೋಗಳನ್ನು ನಂಬಬಾರದು ಎಂದವರು ಮನವಿ ಮಾಡಿದ್ದಾರೆ.

ಈ ಘಟನೆ ಬಳಿಕ ಮಂಗಳೂರು ನಗರ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ನಿಗಾ ಇಡಲಾಗುತ್ತಿದೆ. ಧಾರ್ಮಿಕ ಕೇಂದ್ರ, ಮಾಲ್‌ಗಳು, ಜನನಿಬಿಡ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲಾಗುವುದು. ಶ್ವಾನ ದಳದಿಂದಲೂ ಪರಿಶೀಲನೆ ನಡೆಯಲಿದೆ ಎಂದವರು ತಿಳಿಸಿದರು.
ಘಟನೆಯಲ್ಲಿ ಗಾಯಗೊಂಡ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಆರೋಪಿಗೆ ಗಂಭೀರ ಗಾಯಗಳಾಗಿರುವುದರಿಂದ ಚಿಕಿತ್ಸೆ ನಡೆಯುತ್ತಿದೆ. ಸದ್ಯ ಆತ ಮಾತನಾಡುವ ಪರಿಸ್ಥಿತಿಯಲ್ಲಿಲ್ಲದ ಕಾರಣ ಏನೂ ಮಾಹಿತಿಗಳನ್ನು ಪಡೆದುಕೊಳ್ಳಲಾಗುತ್ತಿಲ್ಲ. ಆತ ಚೇತರಿಸಿಕೊಂಡಿರುವ ಬಗ್ಗೆ ವೈದ್ಯರಿಂದ ಅಧಿಕೃತಗೊಂಡ ಬಳಿಕ ಆತನ ವಿಚಾರಣೆ ನಡೆಯಲಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು