6:46 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಎಸ್ ಡಿಪಿಐ ಕಚೇರಿಗೆ ಬೀಗ: ದ.ಕ. ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್ ಗೆ ಹೈಕೋರ್ಟ್ ನೋಟಿಸ್

24/11/2022, 10:59

ಬೆಂಗಳೂರು(reporter Karnataka.com): ಎಸ್ ಡಿಪಿಐ ಕಚೇರಿಗೆ ಬೀಗ ಮುದ್ರೆ ಹಾಕಿ ಜಫ್ತಿ ಮಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಮಂಗಳೂರು ಪೊಲೀಸ್‌ ಕಮಿಷನರ್ ಮತ್ತು ಪೊಲೀಸ್‌ ವರಿಷ್ಠಾಧಿಕಾರಿಗೆ ರಾಜ್ಯ ಹೈಕೋರ್ಟ್ ನೋಟಿಸ್‌ ಜಾರಿ ಮಾಡಲಾಗಿದೆ‌.

ಈ ಕುರಿತ ಕ್ರಮವನ್ನು ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ಈ ನೊಟೀಸ್ ಜಾರಿಗೊಳಿಸಿದೆ.

ಕಚೇರಿ ತೆರವುಗೊಳಿಸಲು ನಿರ್ದೇಶಿಸಲು ಕೋರಿ ಎಸ್‌ಡಿಪಿಐನ ದಕ್ಷಿಣ ಕನ್ನಡ ಪ್ರಧಾನ ಕಾರ್ಯದರ್ಶಿ ಅನ್ವರ್‌ ಸಾದತ್‌ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಎಸ್ ಡಿಪಿಐ ಪಕ್ಷವನ್ನು ನಿಷೇಧ ಮಾಡಲಾಗಿಲ್ಲ. ಎಸ್ ಡಿಪಿಐಗೆ ಸೇರಿದ ಕಚೇರಿಗೆ ಅಕ್ರಮವಾಗಿ ದಾಳಿ ನಡೆಸಿ, ಜಪ್ತಿ ಮಾಡಿದ್ದಾರೆ. ಎಸ್’ಡಿಪಿಐಗೆ ಸೇರಿದ ಕಚೇರಿಗಳನ್ನು ಮುಚ್ಚಿರುವುದನ್ನು ತೆರವು ಮಾಡುವಂತೆ ಪ್ರತಿವಾದಿಗಳಿಗೆ ಎಸ್’ಡಿಪಿಐ 2022ರ ಅಕ್ಟೋಬರ್‌ 29ರಂದು ಮನವಿ ಸಲ್ಲಿಸಿದ್ದರು. ಆದರೂ ತೆರವು ಮಾಡಿಲ್ಲ ಎಂದು ಕೋರ್ಟ್ ಗಮನಕ್ಕೆ ತರಲಾಗಿದೆ.
ಎಸ್ ಡಿಪಿಐ ಕಚೇರಿ ಜೊತೆ ಮಾಹಿತಿ ಮತ್ತು ಸೇವಾ ಕೇಂದ್ರಗಳನ್ನು ಕೂಡ ಮುಚ್ಚಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಇರುವ ಎಸ್’ಡಿಪಿಐ ಕಚೇರಿಗಳು, ಚುನಾಯಿತ ಕಾರ್ಪೊರೇಟರ್‌ಗಳ ಕಚೇರಿಯನ್ನು ಮುಚ್ಚಲಾಗಿದೆ ಎಂದು ಕೋರ್ಟ್ ಗಮನಕ್ಕೆ ತರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು