2:51 AM Saturday13 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ಮುಗ್ರೋಡಿ: 75 ಲಕ್ಷ ರೂ. ವೆಚ್ಚದಲ್ಲಿ ರಾಜಕಾಲುವೆ ತಡೆಗೋಡೆ ಕಾಮಗಾರಿ; ಶಾಸಕ ವೇದವ್ಯಾಸ್ ಕಾಮತ್ ಚಾಲನೆ

24/11/2022, 12:01

ಮಂಗಳೂರು(reporter Karnataka.com): ಪಾಲಿಕೆಯ ಪದವು ಪಶ್ಚಿಮ ವಾರ್ಡಿನ ಮುಗ್ರೋಡಿಯ ಅಚ್ಚುಕೋಡಿಯಲ್ಲಿ 75 ಲಕ್ಷ ರೂಪಾಯಿ ವೆಚ್ಚದಲ್ಲಿ ರಾಜಕಾಲುವೆ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ನಗರ ಪ್ರದೇಶದಲ್ಲಿ ಮಳೆಗಾಲದ ಸಂದರ್ಭದಲ್ಲಿ ರಾಜಕಾಲುವೆಯಿಂದ ನೀರು ಉಕ್ಕುವ ಸಮಸ್ಯೆ ಪ್ರತಿ ವರ್ಷವೂ ಮರುಕಳಿಸುವ ಹಿನ್ನೆಲೆಯಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಅನುದಾನ ತರಲಾಗಿದೆ. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ನಗರ ಪ್ರದೇಶಕ್ಕೆ ಸಣ್ಣ ನೀರಾವರಿ ಇಲಾಖೆಯಿಂದ ಅನುದಾನ ಬಿಡುಗಡೆಯಾಗಿದೆ. ಜನರಿಗೆ ಕೊಟ್ಟ ಮಾತಿನಂತೆ ಇಂದು ಅನೇಕ ತಗ್ಗು ಪ್ರದೇಶಗಳಲಿಲೂ ರಾಜಕಾಲುವೆ ಅಭಿವೃದ್ಧಿಪಡಿಸಿ ಕೃತಕ ನೆರೆಯಂತಹ ಸಮಸ್ಯೆಯನ್ನು ಬಗೆಹರಿಸಲಾಗಿದೆ ಎಂದರು.
ಮುಗ್ರೋಡಿ ಅಚ್ಚುಕೋಡಿಯಲ್ಲಿ ರಾಜಕಾಲುವೆಯ ಸಮಸ್ಯೆಯನ್ನು ಮನಗಂಡು ತಡೆಗೋಡೆ ನಿರ್ಮಿಸಲು 75 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಅತೀ ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ವನಿತಾ ಪ್ರಸಾದ್, ಮುಖಂಡರಾದ ರವಿಚಂದ್ರ, ಪ್ರಸಾದ್ ಆಚಾರ್ಯ, ಗಿರಿಧರ್ ಶೆಟ್ಟಿ, ಗೋಪಾಲ, ಬಾಬು ಶೆಟ್ಟಿ, ಶುಭಕರ್, ಪದ್ಮನಾಭ, ಸಂದೇಶ್,ರಂಜಿತ್, ಪವನ್, ಕಿರಣ್, ಪ್ರಸಾದ್, ನಿತೇಶ್ ದೇವಾಡಿಗ, ಗೋಪಾಲ ಪೂಜಾರಿ, ಚೇತನ್, ದಿವಾಕರ್, ಯಾದವ, ಜನಾರ್ದನ್, ಪ್ರಭಾಕರ್, ಪದ್ಮ,ಮಮತಾ, ಸುಶೀಲಾ, ಪ್ರೇಮಾ, ರಮ್ಯ, ರಾಧಾ, ಪೂರ್ಣಿಮಾ, ರಜನಿ, ವಸಂತಿ, ಗೋಪಾಲ, ಜಾನಕಿ, ಅನುಷಾ, ಹರ್ಷಿತ, ಜೀವನ್, ಚೇತನ ಇನ್ನಿತರ ಪ್ರಮುಖರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು