3:13 AM Sunday10 - May 2026
ಬ್ರೇಕಿಂಗ್ ನ್ಯೂಸ್
ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಇನ್ನಿಲ್ಲ: ಅನಾರೋಗ್ಯದಿಂದ ನಿಧನ ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ

ಇತ್ತೀಚಿನ ಸುದ್ದಿ

ಶೃಂಗೇರಿಯಲ್ಲಿ 100 ಹಾಸಿಗೆಯ ಆಸ್ಪತ್ರೆಗೆ ಒತ್ತಾಯ: ತಮಟೆ ಬಾರಿಸಿ ಗಲ್ಲಿ ಗಲ್ಲಿ ಸುತ್ತಿದ ಯುವಕರ ತಂಡ

24/11/2022, 17:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳವಾದ ಶೃಂಗೇರಿಯಲ್ಲಿ 100 ಬೆಡ್ ನ ಆಸ್ಪತ್ರೆಗೆ ಆಗ್ರಹಿಸಿ ಸಮಾನ ಮನಸ್ಕ ಯುವಕರ ತಂಡದ ನೇತೃತ್ವದಲ್ಲಿ ತಮಟೆ ಬಾರಿಸುತ್ತಾ ಗಲ್ಲಿ ಗಲ್ಲಿಗಳಲ್ಲಿ ಸುತ್ತಿ ಧರಣಿ ಪ್ರತಿಭಟನೆಯ ಎಚ್ಚರಿಕೆ ನೀಡಲಾಯಿತು.


ಯುವಕರ ತಂಡ ತಮಟೆ ಬಾರಿಸುತ್ತ ಧರಣಿ ಸತ್ಯಾಗ್ರಹದ ಬಗ್ಗೆ ಪ್ರಚಾರ ನಡೆಸಿದರು. ಪೊಲೀಸ್ ಇಲಾಖೆ ಮೈಕ್ ಬಳಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ತಮಟೆ ಉಪಯೋಗಿಸಲಾಯಿತು.

ಆಸ್ಪತ್ರೆ ಒತ್ತಾಯಿಸಿ ಪ್ರತಿಭಟನಾಕಾರರ ತಂಡ ಶೃಂಗೇರಿಯ ಬೀದಿ ಬೀದಿಯಲ್ಲಿ ಸುತ್ತಿ ಪ್ರಚಾರ ನಡೆಸಿತು.

ಶೃಂಗೇರಿ ತಾಲೂಕಿನಾದ್ಯಂತ ಪ್ರಚಾರ ಮಾಡಲು ಯುವಕರು ಮುಂದಾಗಿದ್ದಾರೆ.

ಆಸ್ಪತ್ರೆ ಒತ್ತಾಯಿಸಿ ಕಳೆದ ವರ್ಷ ಶೃಂಗೇರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಒಂದು ತಿಂಗಳ ಒಳಗಾಗಿ ಆಸ್ಪತ್ರೆ ಮಂಜೂರು ಮಾಡುತ್ತೇವೆ ಎಂದು ಅಧಿಕಾರಿಗಳು ಹೇಳಿದ್ದರು

ಇತ್ತೀಚಿನ ಶೃಂಗೇರಿ ಭೇಟಿ ವೇಳೆಯೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತು ಕೊಟ್ಟಿದ್ದರು. ನಾಳೆಯಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಲಾಗಿದೆ. ಮೈಕ್ ಪ್ರಚಾರಕ್ಕೆ ಅನುಮತಿ ನೀಡದ ಪೋಲಿಸ್ ಇಲಾಖೆ ವಿರುದ್ಧ ಯುವಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು