8:15 PM Monday6 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ 2022-23 ವರ್ಷದ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳ ಉದ್ಘಾಟನೆ

24/11/2022, 23:24

ಪುತ್ತೂರು(reporterkarnataka.com): ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕಗಳ ಪ್ರಸಕ್ತ ಶೈಕ್ಷಣಿಕ ವರ್ಷದ ಚಟುವಟಿಕೆ ಕಾಲೇಜಿನ ಬೆಳ್ಳಿಹಬ್ಬ ಸಭಾಭವನದಲ್ಲಿ ನಡೆಸಲಾಯಿತು.

ಕಾರ್ಯಕ್ರಮ ವನ್ನು ಕಾಲೇಜಿನ ಪ್ರಾಂಶುಪಾಲ ವಂ| ಡಾ. ಆಂಟನಿ ಪ್ರಕಾಶ್ ಮೊಂತೆರೊ ಉದ್ಘಾಟಿಸಿ ಮಾತನಾಡಿ, ನನಗಲ್ಲ ನಿನಗೆ ‘ಎಂಬ ಧೈಯವಾಕ್ಯದಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿನ ಕೀಳರಿಮೆಯನ್ನು ಹೋಗಲಾಡಿಸಿ ನಾಯಕತ್ವ ಗುಣ ಹಾಗೂ ಸೇವಾ ಮನೋಭಾವಗಳನ್ನು ಉದ್ದೀಪನಗೊಳಿಸುವಲ್ಲಿ ಸಹಕಾರಿಯಾಗಿದೆ. ಪ್ರತಿಯೊಬ್ಬ ಸ್ವಯಂಸೇವಕನೂ ತನ್ನ ಜವಾಬ್ದಾರಿಯನ್ನರಿತು ಕಾರ್ಯ ನಿರ್ವಹಿಸಬೇಕು.

ಕಾಲೇಜಿನ ಪ್ರತಿಯೊಂದು ಚಟುವಟಿಕೆಯಲ್ಲಿ ಭಾಗವಹಿಸುವುದು ಮಾತ್ರವಲ್ಲದೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳಲ್ಲೂ ಭಾಗಿಯಾಗಬೇಕು. ಜನರಿಗೆ ದುರ್ವ್ಯಸನಗಳ ದುಷ್ಪರಿಣಾಮಗಳ ಬಗ್ಗೆ ಹಾಗೂ ಸಮಾಜದಲ್ಲಿನ ಹಲವಾರು ಪಿಡುಗುಗಳ ಬಗ್ಗೆ ಅರಿವು ಮೂಡಿಸಿ ದೇಶ ಕಟ್ಟುವ ಕಾರ್ಯದಲ್ಲಿ ಭಾಗಿಯಾಗಬೇಕು ಎಂದು ಹೇಳಿದರು.

ಯೋಜನಾಧಿಕಾರಿ ಪುಷ್ಪಾ ಉಪಸ್ಥಿತರಿದ್ದರು.
ಹರ್ಷಿತಾ ಪ್ರಾರ್ಥಿಸಿದರು. ಯೋಜನಾಧಿಕಾರಿ ಪ್ರೊ. ವಾಸುದೇವ ಸ್ವಾಗತಿಸಿ ಪ್ರಾಸ್ತಾವವನೆಗೈದರು. ನಿರೀಕ್ಷಾ ವಂದಿಸಿ, ವೈಷ್ಣವಿ ನಿರೂಪಿಸಿದರು. ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆಯ 2 ಘಟಕಗಳ 200 ಮಂದಿ ಸ್ವಯಂಸೇವಕರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು