2:54 AM Saturday13 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ಸಾಮಾಜಿಕ ಧುರೀಣ ಪಮ್ಮಿ ಕೊಡಿಯಾಲ್ ಬೈಲ್ ಗೆ ದುಬೈನ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯಿಂದ ಗೌರವ ಪ್ರದಾನ

25/11/2022, 12:39

ಮಂಗಳೂರು(reporterkkarnataka.com): ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್(ಪಮ್ಮಿ ಕೊಡಿಯಾಲ್ ಬೈಲ್) ಅವರಿಗೆ
ದುಬೈನ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯು ಗೌರವ ಪ್ರದಾನ ಮಾಡಿ ಗೌರವಿಸಿದೆ.

ದುಬೈನ ಅಲಸಫಾ ಪ್ರದೇಶದಲ್ಲಿರುವ ಜಗದ್ಗುರು ಸುತ್ತೂರು ಸಂಸ್ಥಾನ ಶಾಲಾ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಪಮ್ಮಿ ಕೊಡಿಯಾಲ್ ಬೈಲ್ ಅವರಿಗೆ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ದುಬೈಯಲ್ಲಿ ನಡೆಯುತ್ತಿರುವ ಗಡಿನಾಡ ಉತ್ಸವದಲ್ಲಿ ಗೌರವ ಪ್ರದಾನ ಮಾಡಿ ಸನ್ಮಾನಿಸಲಾಯಿತು.

ಶಾಸಕರಾದ ರಘುನಾಥ ರಾವ್ ಮಲ್ಕಾಪುರೆ, ಪ್ರಕಾಶ್
ರಾಥೋಡ್, ರಾಜ್ಯ ಗಡಿನಾಡು ಅಭಿವೃದ್ಧಿ ನಿಗಮದ ಅಧ್ಯಕ್ಷ, ಮಾಜಿ ಐಎಎಸ್ ಅಧಿಕಾರಿ ಸಿ. ಸೋಮಶೇಖರ್, ಮಂಜೇಶ್ವರದ ಶಾಸಕ ಎ.ಕೆ.ಎಂ. ಅಶ್ರಫ್,ಕ್ವಾಲಿಟಿ ಇಂಡಿಯಾ ಫೌಂಡೇಶನ್ ಅಧ್ಯಕ್ಷ ಡಾ. ವೆಂಕಟೇಶ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಸಾಮಾಜಿಕ, ರಾಜಕೀಯ, ಧಾರ್ಮಿಕ ಕ್ಷೇತ್ರದಲ್ಲಿ, ತನ್ನನ್ನು ತಾನು ತೊಡಗಿಸಿಕೊಂಡು ಸ್ವಾರ್ಥವಿಲ್ಲದೆ ಅಹಂ ಪಡೆಯದೇ ಹೆಸರು ಬಿರುದು ಬಯಸದೆ ಉತ್ತಮ ಸಮಾಜಕ್ಕಾಗಿ ಸೇವೆ ಸಲ್ಲಿಸುತ್ತಿರುವ ಜನ ಮೆಚ್ಚಿದ ನಾಯಕ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಅವರಿಗೆ
ಈ ಗೌರವ ಸಂದಾಯವಾಗಿದೆ.

ಈ ಹಿಂದೆ ಬಿಜೈ ಕೆಎಸ್ಸಾರ್ಟಿಸಿ ವಿದ್ಯಾಗಣಪತಿ ಆಟೋ ಚಾಲಕ ಮಾಲಕರ ಸಂಘ ವತಿಯಿಂದ ಪಮ್ಮಿ ಅವರನ್ನು ಸನ್ಮಾನಿಸಲಾಯಿತು. ಮಂಗಳೂರು ವಿಶ್ವವಿದ್ಯಾನಿಲಯ ತುಳು ಅಧ್ಯಯನ ಪೀಠದ ಸದಸ್ಯರಾಗಿ ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ ಜಾನಪದ ಪರಿಷತ್ ಇದರ ಅಧ್ಯಕ್ಷ ರಾಗಿರುವ ಅವರು ಕೊರೋನಾ ಸಂದರ್ಭದಲ್ಲಿ ಅದೆಷ್ಟು ಮಂದಿ ಬಡವರಿಗೆ ಅಕ್ಕಿಧಾನ್ಯದ ಕಿಟ್ ಗಳನ್ನು ವಿತರಿಸಿ ಒಂದು ಕೈಯಲ್ಲಿ ಕೊಟ್ಟದು ಇನೊಂದು ಕೈಗೆ ಗೊತ್ತಾಗ ಬಾರದು ಎನ್ನುವ ಮನೋಭಾವ ಹೊಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು