2:09 AM Friday12 - December 2025
ಬ್ರೇಕಿಂಗ್ ನ್ಯೂಸ್
ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

ಬೆಂಗಳೂರು: ಮನೆಕೆಲಸದಾಕೆ ಜತೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದಾಗಲೇ ಹೃದಯಾಘಾತಕ್ಕೆ ವೃದ್ಧ ಸಾವು

25/11/2022, 21:11

ಬೆಂಗಳೂರು(reporterkarnataka.com):: ಮನೆಗೆಲಸದಾಕೆ ಜತೆ ಲೈಂಗಿಕ ಕ್ರಿಯೆ ನಡೆಸುತ್ತಿರುವಾಗಲೇ ವೃದ್ದರೊಬ್ಬರು ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ಸಿಲಿಕಾನ್ ಸಿಟಿಯ ಪುಟ್ಟೇನಹಳ್ಳಿಯಲ್ಲಿ ನಡೆದಿದೆ.
ಮೃತಪಟ್ಟ ವೃದ್ಧರನ್ನು ಬಾಲಸುಬ್ರಮಣಿಯನ್ (67) ಎಂದು ಗುರುತಿಸಲಾಗಿದೆ. ಇದರೊಂದಿಗೆ ಪುಟ್ಟೇನಹಳ್ಳಿಯ ರಸ್ತೆಯಲ್ಲಿ ಪತ್ತೆಯಾಗಿದ್ದ ವೃದ್ಧರ ಶವ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ.

ಬಾಲಸುಬ್ರಮಣಿಯನ್ ಅವರು ಮನೆ ಕೆಲಸದಾಕೆ ಜೊತೆ ಆಕೆಯ ಮನೆಯಲ್ಲಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗ ಹೃದಯಾಘಾತಕ್ಕೀಡಾಗಿ ಮೃತಪಟ್ಟರು ಎಂಬ ಸತ್ಯ ಪೊಲೀಸರ ತನಿಖೆಯಿಂದ ಹೊರಬಿದ್ದಿದೆ.
ಮೊಮ್ಮಗನನ್ನು ಬ್ಯಾಡ್ಮಿಂಟನ್ ಕ್ಲಾಸ್‍ಗೆ ಕರೆದುಕೊಂಡು ಹೋಗಿದ್ದ ಬಾಲಸುಬ್ರಮಣಿಯನ್ ಸಂಜೆ ವೇಳೆಗೆ ಸೊಸೆಗೆ ಕರೆ ಮಾಡಿ ಹೊರಗಡೆ ಕೆಲಸ ಇದೆ ಎಂದು ತಿಳಿಸಿದ್ದಾರೆ. ಬಳಿಕ ಕರೆ ಮಾಡಿದರೆ ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ಆ ನಂತರ ಮಗ ಠಾಣೆಗೆ ನಾಪತ್ತೆ ದೂರು ದಾಖಲಿಸಿದ್ದರು. ಈ ಬಗ್ಗೆ ತನಿಖೆ ಆರಂಭಿಸಿದ ಪೊಲೀಸರಿಗೆ ಶಾಕ್ ಕಾದಿತ್ತು. ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಚೀಲ ಮತ್ತು ಬೆಡ್‍ಶೀಟ್‍ನಲ್ಲಿ ಸುತ್ತಿದ್ದ ಮೃತದೇಹವೊಂದು ಜೆ.ಪಿ. ನಗರದ 6ನೇ ಹಂತದ ಸಮೀಪ ಪತ್ತೆಯಾಗಿತ್ತು. ಇದು ಬಾಲಸುಬ್ರಮಣಿಯನ್ ಎಂದು ಗುರುತಿಸಲಾಗಿತ್ತು. ಬಳಿಕ ವೃದ್ಧನ ಸಾವಿನ ಬಗ್ಗೆ ಅನುಮಾನ ಮೂಡಿತ್ತು. ಆದರೆ, ದೇಹದ ಮೇಲೆ ಯಾವುದೇ ಗಾಯಗಳು ಕಂಡು ಬಂದಿಲ್ಲ. ಹೇಗೆ ಮೃತಪಟ್ಟರು ಎಂದು ತಲೆಕೆಡಿಸಿಕೊಂಡರು ಪೊಲೀಸರು.
ಈ ವೇಳೆ ಸಿಡಿಆರ್ ಪರಿಶೀಲಿಸಿದಾಗ ಶಾಕಿಂಗ್ ವಿಚಾರ ಬೆಳಕಿಗೆ ಬಂದಿತ್ತು.

ಬಾಲಸುಬ್ರಮಣಿಯನ್ ಕಾಲ್ ಹಿಸ್ಟರಿ ಜಾಲಾಡಿದಾಗ ನಿರಂತರವಾಗಿ ಮಹಿಳೆಯೊಬ್ಬರ ಜತೆಗೆ ಸಂಪರ್ಕದಲ್ಲಿ ಇದ್ದದ್ದು ತಿಳಿಯಿತು. ಇನ್ನು ಸಾರಕ್ಕಿ ಸಿಗ್ನಲ್ ಬಳಿ ವೃದ್ಧರ ಲಾಸ್ಟ್ ಲೊಕೇಶನ್ ದಾಖಲಾಗಿತ್ತು. ಹೀಗಾಗಿ ಆ ಮಹಿಳೆ ಯಾರು ಅನ್ನೋದರ ಕುರಿತು ಖಾಕಿ ಬೆನ್ನು ಹತ್ತಿತ್ತು. ತನಿಖೆ ವೇಳೆ ಬಾಲಸುಬ್ರಮಣಿಯನ್ ಮನೆಗೆ ಬರುತ್ತಿದ್ದ ಮನೆ ಕೆಲಸದಾಕೆ ಮೇಲೆ ಅನುಮಾನ ಮೂಡಿತ್ತು. ನಂತರ ಆಕೆಯನ್ನು ವಿಚಾರಣೆಗೆ ಒಳಪಡಿಸಿದಾಗ ಸಾವಿನ ಸತ್ಯ ಬಯಲಾಯಿತು.

ಇನ್ನು ವೃದ್ಧ ಹೃದಯಾಘಾತದಿಂದ ಸಾವನ್ನಪ್ಪಿದ್ದರಿಂದ ಗಾಬರಿಗೊಂಡ ಮನೆಕೆಲಸದಾಕೆ ತನ್ನ ಗಂಡನಿಗೆ ಈ ಬಗ್ಗೆ ಮಾಹಿತಿ ನೀಡಿದ್ದಳು. ನಂತರ ಮನೆಗೆ ಬಂದ ಗಂಡ ಮತ್ತು ಸಹೋದರ ಸೇರಿ ಸುಬ್ರಮಣಿಯನ್ ಮೃತದೇಹವನ್ನು ಪ್ಲಾಸ್ಟಿಕ್‌ ಬ್ಯಾಗ್‍ನಲ್ಲಿ ಕಟ್ಟಿ ತೆಗೆದುಕೊಂಡು ಹೋಗಿ ರಸ್ತೆ ಮಧ್ಯೆ ಹಾಕಿ ಬಂದಿದ್ದರು.

ಪೊಲೀಸ್ ವಿಚಾರಣೆ ವೇಳೆ ಮನೆ ಕೆಲಸದಾಕೆ ನಡೆದ ವಿಚಾರವನ್ನು ಹೇಳಿದ್ದು, ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗ ಸಾವು ಆಯ್ತು. ನಮ್ಮ ಮನೆಯಲ್ಲೇ ಮೃತಪಟ್ಟರು. ಕೊಲೆ ಪ್ರಕರಣದಲ್ಲಿ ಪೊಲೀಸರು ಎಲ್ಲಿ ಬಂಧಿಸುತ್ತಾರೆ ಎಂದು ಹೆದರಿ ಹೀಗೆ ಮಾಡಿದ್ದೇವೆ ಎಂದು ಹೇಳಿದ್ದಾಳೆ.

ಇತ್ತೀಚಿನ ಸುದ್ದಿ

ಜಾಹೀರಾತು