12:38 PM Wednesday24 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಬಿಜಗರಣಿ: ಅಂಬೇಡ್ಕರ್ ಭವನ ಉದ್ಘಾಟನೆ, ಗೋದಾಮು, ಗ್ರಾಪಂ ಕಟ್ಟಡಕ್ಕೆ ಶಂಕು ಸ್ಥಾಪನೆ

26/11/2022, 19:51

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಬಿಜಗರಣಿ ಗ್ರಾಮದಲ್ಲಿ ಭಾರತೀಯ ಸಂವಿಧಾನ ದಿನದ ಪ್ರಯುಕ್ತ ನೂತನವಾಗಿ ನಿರ್ಮಾಣಗೊಂಡ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಭವನವನ್ನು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಉದ್ಘಾಟಿಸಿದರು.

ಗ್ರಾಮ ಪಂಚಾಯತಿ ಕಟ್ಟಡ ಹಾಗೂ ರೈತರ ಗೋದಾಮ ಕಟ್ಟಡಗಳ ನಿರ್ಮಾಣದ ಕಾರ್ಯಕ್ಕೂ ಅವರು ಶಂಕುಸ್ಥಾಪನೆ ನೆರವೇರಿಸಿದರು.
ವಿಶ್ವದ ಶ್ರೇಷ್ಠ ಸಂವಿಧಾನದ ಮೂಲಕ ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನತೆಯ ಹಕ್ಕು ಕೊಟ್ಟಿರುವವರು ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರು. ‘ಭಾರತದ ಸಂವಿಧಾನ’ವು ಅಂಗೀಕಾರವಾದ ಈ ದಿನದಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವರ ಹೆಸರಿನ ಭವನವನ್ನು ಉದ್ಘಾಟಿಸುವ ಮೂಲಕ ಗೌರವಪೂರ್ವಕ ನಮನಗಳನ್ನು ಸಲ್ಲಿಸೋಣ. ಅವರು ಹಾಕಿಕೊಟ್ಟ ಆದರ್ಶದ ಮಾರ್ಗದಲ್ಲಿ ಸಾಗೋಣ ಎಂದು ಲಕ್ಷ್ಮೀ ಹೆಬ್ಬಾಳಕರ್ ಈ ಸಂದರ್ಭದಲ್ಲಿ ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಗ್ರಾಮದ ಸ್ವಚ್ಚತೆ ಹಾಗೂ ಸುರಕ್ಷತೆಯ ಹಿತದೃಷ್ಟಿಯಿಂದ ಕಸವನ್ನು ಎತ್ತುವ ಸ್ವಚ್ಛವಾಹಿನಿ‌‌ ಎನ್ನುವ ವಾಹನಕ್ಕೆ ಶಾಸಕರು ಚಾಲನೆಯನ್ನು ನೀಡಿದರು.

ಈ ಸಮಯದಲ್ಲಿ ಗ್ರಾಮದ ಹಿರಿಯರು, ಎಪಿಎಂಸಿ ಚೇರಮನ್ ಯುವರಾಜ ಕದಂ, ಕಾಂಗ್ರೆಸ್ ಯುವ ಮುಖಂಡ ಮೃಣಾಲ ಹೆಬ್ಬಾಳಕರ್, ಯಲ್ಲಪ್ಪ ಬೆಳಗಾಂವ್ಕರ್, ಮನೋಹರ್ ಬೆಳಗಾಂವ್ಕರ್, ಅಶೋಕ ಚೌಗುಲೆ, ಗ್ರಾಮ ಪಂಚಾಯತಿ ಸದಸ್ಯರು, ಪಂಚಾಯತ ಅಭಿವೃದ್ಧಿ ಅಧಿಕಾರಿ ಹರ್ಷವರ್ಧನ್ ಅಗಸರ, ಪೂಜಾ ಸುತಾರ, ವಿರೇಶ ಹೊಸಮಠ, ಕಾರ್ಯ ನಿರ್ವಾಹಕ ಅಧಿಕಾರಿ ರಾಜೇಶ್ ದಾನವಾಡಕರ್, ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷರಾದ ಅರುಣ ಕಟಾಂಬಳೆ ರಾಜೇಂದ್ರ ಮೊರಬದ, ಗಣೇಶ ಕೆ. ಎಸ್. ನಾಮದೇವ ಮೋರೆ, ಸಂತೋಷ ಕಾಂಬಳೆ, ಪ್ರೇಮ ಕಾಂಬಳೆ ಹಾಗೂ ಗ್ರಾಮದ ಅನೇಕ ಜನರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು