6:59 AM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ಮಕ್ಕಳ ಶೈಕ್ಷಣಿಕ ಅಭಿವೃದ್ಧಿ ಹಾಗೂ ಶಿಕ್ಷಣಕ್ಕೆ ಕುಡಿಯುವ ನೀರು ವ್ಯವಸ್ಥೆಗೆ ಸಹಾಯ ಹಸ್ತ: ಫೈಟರ್ ರವಿ ಸಂಕಲ್ಪ

26/11/2022, 20:45

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಫೈಟರ್ ರವಿ ಅವರು ಶಿಕ್ಷಣದ ಜೊತೆಯಲ್ಲಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಸಹಾಯಹಸ್ತ ನೀಡುವುದಾಗಿ ಹೇಳಿದ್ದಾರೆ.
ಅವರು ನಾಗಮಂಗಲ ತಾಲೂಕಿನ ಬೆಳ್ಳೂರು ಹೋಬಳಿಯ ವಿವಿಧ ಸರ್ಕಾರಿ ಪ್ರೌಢಶಾಲೆ , ವಡೇರಪುರ ಹಟ್ನಾ ಕೆಂಬಾರೆ, ಕಾಳಿಂಗನಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಮಕ್ಕಳ ಶೈಕ್ಷಣಿಕ ಹಾಗೂ ಶಿಕ್ಷಣಕ್ಕೆ ಕುಡಿಯುವ ನೀರು ಶಾಲಾ ಕಾರ್ಯಕ್ರಮಗಳಿಗೆ ಸಹಾಯದ ಭರವಸೆ ನೀಡಿದರು.
ಸಾಮಾಜಿಕ ಸೇವೆಗಳಲ್ಲಿ ಆರೋಗ್ಯ ಶುದ್ಧ ನೀರು ಶಿಕ್ಷಣ ಶೈಕ್ಷಣಿಕ ಪ್ರಗತಿಯತ್ತ ತಾಲೂಕಿನ ಎಲ್ಲಾ ಶಾಲೆಗಳಿಗೂ ಕೈಲಾದ ಸಹಾಯ ಮಾಡುತ್ತಿರುವ ಸಮಾಜ ಸೇವಕರಾದ ರವಿಯವರು ತಾಲೂಕಿನ ಅಭಿವೃದ್ಧಿಯ ಮುಂಚೂಣಿಗೆ ಹೊಸ ಅಧ್ಯಯನ ಬರೆಯಲು ಇವರ ಕನಸಿನ ಗುರಿ ತ್ರಿಕಲ್ಪ ಯೋಜನೆಯ ಉದ್ದೇಶಗಳಲ್ಲಿ ಒಂದಾಗಿದೆ.
ರವಿಯವರು ಇಂದು ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳಿಗೆ ಆಟದ ಸಾಮಗ್ರಿಗಳು ಕುಡಿಯುವ ನೀರಿನ ವ್ಯವಸ್ಥೆ ಮಾಡಿಸುವ ಭರವಸೆ ನೀಡುವ ಮುಖಾಂತರ ಶಿಕ್ಷಣಕ್ಕೂ ಹೆಚ್ಚಿನ ಆದ್ಯತೆ ಕೊಡುವ ಭರವಸೆಯ ಆಶಾ ಕಿರಣವಾಗಿದೆ.
ಇದೇ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ತಿಮ್ಮರಾಯಗೌಡ ಲೋಕೇಶ್ ಹಾಗೂ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿಜೆ ಕುಮಾರ್ ಹಾಗೂ ಅನೇಕ ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.

ದೇವಲಾಪುರ ಜಗದೀಶ್ ನಾಗಮಂಗಲ

ಇತ್ತೀಚಿನ ಸುದ್ದಿ

ಜಾಹೀರಾತು