ಇತ್ತೀಚಿನ ಸುದ್ದಿ
ಚಿಕ್ಕಮಗಳೂರು: ಅಕಾಲಿಕ ಮಳೆಗೆ ಕೊಚ್ಚಿ ಹೋದ ಒಣ ಹಾಕಿದ್ದ ಕಾಫಿ
27/11/2022, 21:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporter Karnataka@gmail.com
ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾನುವಾರ ಸಂಜೆ ಅಕಾಲಿಕ ಮಳೆ ಸುರಿದ ಪರಿಣಾಮ ಕಣದಲ್ಲಿ ಒಣ ಹಾಕಿದ್ದ ಕಾಫಿ ಕೊಚ್ಚಿ ಹೋದ ಘಟನೆ ಕೊಟ್ಟಿಗೆಹಾರದ ಗಬ್ಗಲ್ ಗ್ರಾಮದಲ್ಲಿ ನಡೆದಿದೆ.
ಎಂ.ಟಿ. ಉಪೇಂದ್ರ ಎಂಬುವವರು ಕಣದಲ್ಲಿ ಒಣ ಹಾಕಿದ್ದ ಕಾಫಿ ಮಳೆನೀರಿನೊಂದಿಗೆ ಕೊಚ್ಚಿ ಹೋಗಿದ್ದು ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಮಾವಿನಕುಡಿಗೆ, ಕೂವೆ, ಹುಯಿಲುಮನೆ ಭಾಗದಲ್ಲೂ ಧಾರಾಕಾರ ಮಳೆಯಾಗಿದ್ದು ಇದರಿಂದ ಕಾಫಿ ಕೊಯ್ಲು ಮಾಡಿ ಒಣ ಹಾಕಿದ್ದ ಬೆಳೆ ನೀರು ಪಾಲಾಗಿದ್ದು ಕಾಫಿ ಬೆಳೆಗಾರರಿಗೆ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ.