3:32 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಸೂಪರ್ ಕಾಪ್ ಉಡುಪಿ ಪೊಲೀಸ್ ಇನ್ಸ್ ಪೆಕ್ಟರ್ ಪ್ರಮೋದ್ ವರ್ಗಾವಣೆ !: ಕೆಲವರಿಗೆ ಖುಷಿ; ಹಲವರಿಗೆ ದುಃಖ

29/11/2022, 21:12

ಅನುಷ್ ಪಂಡಿತ್ ಮಂಗಳೂರು
info.reporterkarnataka@gmail.ಕಾಂ

ಉಡುಪಿ ನಗರ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಅವರಿಗೆ ವರ್ಗಾವಣೆಯಾಗಿದೆ.

ಪ್ರಮೋದ್ ಅವರನ್ನು ಮಲ್ಪೆ ಕರಾವಳಿ ಕಾವಲು ಪೊಲೀಸ್ ಠಾಣೆ ನಿರೀಕ್ಷಕರಾಗಿ ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ.
ಕರಾವಳಿಯ ಸೂಕ್ಷ್ಮ ಜಿಲ್ಲೆಗಳಲ್ಲಿ ಒಂದಾಗಿರುವ ಉಡುಪಿ ಜಿಲ್ಲೆಯಲ್ಲಿ ಪ್ರಮೋದ್ ಕುಮಾರ್ ಅವರದ್ದು ಬಲು ದೊಡ್ಡ ಹೆಸರು. ಸಭ್ಯರಿಗೆ ಗೆಳೆಯರಾಗಿ, ಸಮಾಜಘಾತಕ ಶಕ್ತಿಗಳಿಗೆ ಅವರು ಸಿಂಹಸ್ವಪ್ನರಾಗಿದ್ದರು. ಅಕ್ರಮ ಚಟುವಟಿಗೆ ಲಗಾಮು ಜತೆಗೆ ರೌಡಿಸಂ ಮಟ್ಟ ಹಾಕಿದ್ದಾರೆ.
ಪ್ರಮೋದ್ ಅವರು ಮಂಗಳೂರಿನಲ್ಲಿದ್ದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಿಲ್ಡರೊಬ್ಬರಿಗೆ ಕಪಾಳ ಮೋಕ್ಷ ಮಾಡುವ ಮೂಲಕ ತನ್ನ ಎದೆಗಾರಿಕೆಯನ್ನು ಸಾಬೀತುಪಡಿಸಿದ್ದರು.

ಇವರ ವರ್ಗಾವಣೆ ಆದೇಶ ಬಂದಾಗ ಪ್ರಮೋದ್ ಅವರ ಸಹೋದ್ಯೋಗಿ ಪೊಲೀಸರೇ ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದರು. ಪ್ರಮೋದ್ ಅವರು ಕಳೆದ 2 ವರ್ಷಗಳಿಂದ ಉಡುಪಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅಕ್ರಮ ಚಟುವಟಿಕೆಗಳಿಗೆ ಬ್ರೇಕ್ ಹಾಕಿದ್ದಾರೆ. ಇದೀಗ ದಕ್ಷ ಪೊಲೀಸ್ ಅಧಿಕಾರಿಯ ವರ್ಗಾವಣೆ ಹಲವರಿಗೆ ಬೇಸರ ತರಿಸಿದೆ. ಉಡುಪಿ ಜನತೆ ಪ್ರಮೋದ್ ಅವರು ಇನ್ನೂ 2 ವರ್ಷವಾದರೂ ಜಿಲ್ಲೆಯಲ್ಲಿ ಸೇವೆ ಮಾಡಬೇಕೆಂಬ ಇರಾದೆ ಇಟ್ಟುಕೊಂಡಿದ್ದರು. ಯಾಕೆಂದರೆ, ಕ್ರಿಮಿನಲ್ ಒಬ್ಬ ಕ್ರೈಂ ಮಾಡುವ ಮೊದಲು ಪ್ರಮೋದ್ ಅವರನ್ನು ನೆನಪಿಸಿಕೊಳ್ಳುತ್ತಿದ್ದ. ಕೆಟ್ಟ ಕೆಲಸಕ್ಕೆ ಕೈ ಹಾಕುವ ಮೊದಲು 10 ಬಾರಿ ಯೋಚಿಸುವಂತೆ ಪ್ರಮೋದ್ ಮಾಡಿದ್ದರು.

ಉಡುಪಿ ನಗರದಲ್ಲಿ ಅಕ್ರಮ ಚಟುವಟಿಕೆ, ರೌಡಿಸಂ ಮಟ್ಟ ಹಾಕುವುದರ ಜತೆಗೆ ಅವರು ಭ್ರಷ್ಟಾಚಾರ, ಪಕ್ಷಪಾತ ವಿರೋಧಿಯಾಗಿದ್ದರು.
ಪ್ರಮೋದ್ ವರ್ಗಾವಣೆ ಜತೆಗೆ ಕರಾವಳಿ ಕಾವಲು ಪೊಲೀಸ್ ನಿರೀಕ್ಷಕ ಮಂಜಪ್ಪ ಡಿ.ರಾಮ ಕೊಂಡಾಡಿ ಉಡುಪಿ ನಗರ ಪೊಲೀಸ್ ಠಾಣಾ ನಿರೀಕ್ಷಕರಾಗಿ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ನಿರೀಕ್ಷಕ ನಾಗರಾಜ್ ಟಿ.ಡಿ. ಕಾರ್ಕಳ ವೃತ್ತ ಪೊಲೀಸ್ ನಿರೀಕ್ಷಕರಾಗಿ ಹಾಗೂ ಕಾರ್ಕಳ ವೃತ್ತ ನಿರೀಕ್ಷಕ ಸಂಪತ್ ಕುಮಾರ್ ಎ. ಕರಾವಳಿ ಕಾವಲು ಪೊಲೀಸ್ ನಿರೀಕ್ಷಕರಾಗಿ ವರ್ಗಾವಣೆಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು