1:26 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಮಕ್ಕಳು ಪಠ್ಯ ಪುಸ್ತಕದ ಜತೆ ದಿನಪತ್ರಿಕೆ, ಸ್ಪರ್ಧಾತ್ಮಕ ಪರೀಕ್ಷೆಗಳ ಬಗೆಗಿನ ಪುಸ್ತಕ ಓದಬೇಕು: ಶಾಸಕಿ ಲಕ್ಷ್ಮೀ ಹೆಬ್ಬಾಳಕರ್

01/12/2022, 19:41

ಬೆಳಗಾವಿ(reporterkarnataka.com): ಗ್ರಂಥಾಲಯ ಸದ್ಬಳಕೆ ಮಾಡಿಕೊಳ್ಳಬೇಕೆಂದು ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಸಲಹೆ ನೀಡಿದ್ದಾರೆ.

ಅವರು ಮಕ್ಕಳ ಗ್ರಂಥಾಲಯ,ಡಿಜಿಟಲ್‌ ಲೈಬ್ರರಿ ಉದ್ಘಾಟಿಸಿ ಮಾತನಾಡಿದರು.ವಿದ್ಯಾರ್ಥಿಗಳು ಪಠ್ಯದ ಜತೆ ಸಾಧಕರ ಪುಸ್ತಕ ಓದಬೇಕು. ದಿನಪತ್ರಿಕೆ, ಸ್ಪರ್ಧಾತ್ಮಕ ಪರೀಕ್ಷೆಗಳ ಬಗೆಗಿನ ಪುಸ್ತಕ ಓದುವ, ಓದಿದ್ದನ್ನು ಮನನ ಮಾಡಿಕೊಳ್ಳುವುದು ರೂಢಿಸಿಕೊಂಡಲ್ಲಿ ಸಾಧನೆ ಮಾಡಬಹುದಾಗಿದೆ ಎಂದರು.

ಇದೇ ಸಮಯದಲ್ಲಿ ಗ್ರಾಮದ ಗರ್ಭಿಣಿಯರಿಗೆ ಪೌಷ್ಠಿಕ ಆಹಾರವನ್ನು ವಿತರಿಸಿ, ತಾಯಿ ಮತ್ತು ಮಗುವಿನ ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡುವಂತೆ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ತಾಲೂಕು ಪಂಚಾಯತ್‌ ಕಾರ್ಯ ನಿರ್ವಾಹಕ ಅಧಿಕಾರಿ ರಾಜೇಶ ಧಾನವಾಡ‌, ಮೋಹನ ಸಾಂಬ್ರೇಕರ್, ಬಾಳು ದೇಸೂರಕರ್, ಮಹೇಶ ಕೋಲಕಾರ, ಸಿಡಿಪಿಓ ಚಂದ್ರಶೇಖರ ಸುಖಸಾರೆ, ಪಿಡಿಓ ಸುಜಾತಾ ಬಟಕುರ್ಕಿ, ಗ್ರಾಪಂ ಅಧ್ಯಕ್ಷೆ ಪ್ರೇಮಾ ಹಿರೋಜಿ, ಉಪಾಧ್ಯಕ್ಷೆ ಅಂಜನಾ ನಾಯಕ, ಬಿಇಓ ದಾಸಪ್ಪಗೌಡರ, ಸಿ ಆರ್ ಪಿ ತಾವರೆ, ರಮೇಶ ಹಿರೋಜಿ, ಉಮೇಶ ಚೊಪಡೆ, ಮೋಹನ ಗರಗ, ಸಚಿನ ಜಾಧವ್, ಗಣೇಶ ಸುತಾರ, ದಿನೇಶ್ ಲೋಹಾರ, ಮೀನಾಕ್ಷಿ ಪಾಟೀಲ, ಮಂಜುಳಾ ನಾಯಕ, ಲಕ್ಷ್ಮೀ ಶಿಂಧೆ, ಲಕ್ಷ್ಮೀ ಸುತಾರ, ಕಲಾವತಿ ದೇಸೂತಕ‌, ಅನುರಾಧಾ ವಾಸ್ಕೊರೆ, ಶೀಲಾ ಸಾಂಬ್ರೇಕರ್, ಅಶ್ವಿನಿ ಲೋಹಾರ ಇತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು