ಇತ್ತೀಚಿನ ಸುದ್ದಿ
ಮೂಡಿಗೆರೆ: 3ನೇ ದಿನವೂ ಮುಂದುವರಿದ ಕಾಡಾನೆ ಸೆರೆ ಕಾರ್ಯಾಚರಣೆ; ಪತ್ತೆಗೆ ಡ್ರೋನ್ ಬಳಕೆ
01/12/2022, 19:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka.com
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ 3ನೇ ದಿನವಾದ ಗುರುವಾರ ಕೂಡ ಮುಂದುವರಿದಿದೆ.
3ನೇ ದಿನವಾದ ಗುರುವಾರ ತಳವಾರ, ದೊಡ್ಡಹಳ್ಳ, ಕುಂದೂರು ಭಾಗದಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಮುಂದುವರಿದಿದೆ. 6 ಸಾಕಾನೆಗಳ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ.
ಕಾಡಾನೆಗಳ ಪತ್ತೆಗೆ ಕ್ಯಾಮರಾಗಳ ಬಳಕೆ ಮಾಡಲಾಗಿದೆ. ಅರಣ್ಯ ಇಲಾಖೆ ಕಾಡಾನೆ ಜಾಡು ಹಿಡಿದು ಕಾರ್ಯಾಚರಣೆ ಆರಂಭಿಸಿದೆ.