9:10 AM Tuesday22 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ…

ಇತ್ತೀಚಿನ ಸುದ್ದಿ

ಗೆದ್ದ ಅಭ್ಯರ್ಥಿಯಲ್ಲಿ ಪಕ್ಷ ಬಿಡುವುದಿಲ್ಲವೆಂದು ಅಫಿದವಿತ್ ಪಡೆಯುವ ಕಾನೂನು ಬರಲಿ: ಜಸ್ಟಿಸ್ ಅರಳಿ ನಾಗರಾಜ್

01/12/2022, 20:35

ವಿಜಯಪುರ(reporterkarnataka.com): ಚುನಾವಣೆ ಸಂದರ್ಭದಲ್ಲಿ ಪ್ರತಿಯೊಬ್ಬ ಸ್ಪರ್ಧಿಯಲ್ಲೂ ನಾನು ಗೆದ್ದು ಬಂದ ಮೇಲೆ ಯಾವುದೇ ಪಕ್ಷ ಬದಲಾಯಿಸುವುದಿಲ್ಲ ಎಂದು ಅಫಿಡವಿಟ್ ಪಡೆದು ಕೊಳ್ಳುವ ಕಾನೂನು ರೂಪುಗೊಳ್ಳಬೇಕಿದೆ ಎಂದು ಜಸ್ಟಿಸ್ ಅರಳಿ ನಾಗರಾಜ್ ಹೇಳಿದರು.
ಅವರು ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಮತ್ತು ರಾಷ್ಟ್ರೀಯ ಸೌಹಾರ್ದ ವೇದಿಕೆ ವಿಜಪುರ ಜಂಟಿ ಆಶ್ರಯದಲ್ಲಿ ಗುರುವಾರ ವಿಜಯಪುರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ್ದ “ಸಂವಿಧಾನದ ಆಶಯ ಈಡೇರಿದೆಯೇ? ” – ವಿಚಾರ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ದೇಶ ನನಗೇನು ಕೊಟ್ಟಿದೆ ಎಂಬುದು ಮುಖ್ಯವಲ್ಲ. ದೇಶಕ್ಕಾಗಿ ನಾನೇನು ಕೊಡಬಲ್ಲೆ ಎಂಬುದು ಮುಖ್ಯ , ಸ್ವಾತಂತ್ರ್ಯ ಪೂರ್ವಕ್ಕೆ ದೇಶ ಪ್ರೇಮ ಇತ್ತು . ಇತ್ತೀಚೆಗೆ ಸ್ವಾರ್ಥ ಪ್ರೇಮ ಹೆಚ್ಚಾಗಿದೆ. ಈ ಕಾರಣದಿಂದಾಗಿಯೇ ಇಂದು ಒಂದು ಪಕ್ಷ ಸೇರಿ ಗೆದ್ದು ಬಂದವರು ಅವರಿಗೆ ಬೇಕಾದಂತೆ ಪಕ್ಷ ಬದಲಿಸಿ ಗೆಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಂವಿಧಾನದ ಆಶಯ ಈಡೇರಿದೆಯೋ ಇಲ್ಲವೋ ಎಂಬ ಪ್ರಶ್ನೆ ತಮ್ಮ ಮುಂದೆ ಇಡುತ್ತೇನೆ, ಮೂಕ ಪ್ರೇಕ್ಷಕನಾಗದೆ ಪ್ರಶ್ನೆಗಳನ್ನು ಕೇಳುವ ಮನಸ್ಥಿತಿ ಬೆಳೆಸಿಕೊಳ್ಳಬೇಕು. ಬ್ಯಾಂಕ್ ಬಾಲನ್ಸ್ ಮೊಬೈಲ್ ನಲ್ಲಿ ನೋಡಿಕೊಳ್ಳಬಹುದು. ಆಯಸ್ಸು ಎಷ್ಟು ಎಂಬುದು ತಿಳಿದುಕೊಳ್ಳಲು ಸಾಧ್ಯವಿಲ್ಲ ಈ ನಿಟ್ಟಿನಲ್ಲಿ ಯುವಜನತೆ ಅಲೋಚಿಸಬೇಕಿದೆ ಎಂದು ಜಸ್ಟಿಸ್ ಅರಳಿ ನಾಗರಾಜ್ ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಜಸ್ಟಿಸ್ ವಸಂತ ಮುಳಸಾವಳಗಿ ಮಾತನಾಡಿ, ಸಂವಿಧಾನದ ಆಶಯಗಳು ಸ್ಪಷ್ಟವಾಗಿವೆ ಮತ್ತು ನಿಖರವಾಗಿವೆ. ಅವುಗಳನ್ನು ಜಾರಿಗೊಳಿಸುವ ನಮ್ಮ ವ್ಯವಸ್ಥೆ ಎಡವುತ್ತಿರುವುದರಿಂದ ಸಂವಿದಾನದ ಆಶಯ ಈಡೇರಿದೆಯೇ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಬೇಕಾದರೆ ಯುವಜನತೆ ಜಾಗೃತರಾಗಿ ಕರ್ತವ್ಯ ನಿರ್ವಹಿಸಬೆಕಾಗಿದೆ.


ವೇದಿಕೆಯಲ್ಲಿ ಹಿರಿಯ ನ್ಯಾಯವಾದಿ ಮತ್ತು ಸಾಹಿತಿ ವಿದ್ಯಾವತಿ ಅಂಕಲಗಿ, RSV ಸಂಸ್ಥಾಪಕಿ ರಾಜೇಶ್ವರಿ ಹಿಪ್ಪರಗಿ, ನಿರ್ದೇಶಕ ಜೆ.ಎಸ್. ಪಾಟೀಲ್, ಅಧ್ಯಕ್ಷ ಚಂದ್ರಶೇಖರ ಘಂಟಪ್ಪಗೋಳ, ಕಾರ್ಯದರ್ಶಿ ಫಯಾಜ್ ಕಲಾದಗಿ ಮುಂತಾದವರು ಉಪಸ್ಥಿತರಿದ್ದರು. ಮಣಿಕಂಠ ಮಠಪತಿಯವರು ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಿದರು
ಚಂದ್ರಶೇಖರ ಘಂಟಪ್ಪಗೋಳ ಸ್ವಾಗತಿಸಿ NSCDF ಅಧ್ಯಕ್ಷ ಗಂಗಾಧರ್ ಗಾಂಧಿ ಪ್ರಸ್ತಾವನೆಗೈದರು. ರೋಹಿಣಿ ಕುಲಕರ್ಣಿ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು