ಇತ್ತೀಚಿನ ಸುದ್ದಿ
ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಸಂವಿಧಾನದಿನ ಆಚರಣೆ
02/12/2022, 11:53
ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜಿನ ಆವರಣದಲ್ಲಿ ರಾಷ್ಟ್ರೀಯ ಸಂವಿಧಾನ ದಿನ ಆಚರಿಸಲಾಯಿತು.
ಅಧ್ಯಕ್ಷತೆಯನ್ನು ಕಾಲೇಜನ ಪ್ರಾಚಾರ್ಯರಾದ ವಂ| ಡಾ| ಆಂಟನಿ ಪ್ರಕಾಶ್, ಮೊಂತೆರೊ ಅವರು ವಹಿಸಿ ಸಂವಿಧಾನ ದಿನದ ಬಗ್ಗೆ ಸ್ಕೂಲ ಪರಿಚಯ ನೀಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿಯಾದ ಅನಿತಾ ಸಂವಿಧಾನ ಹಾಗೂ ಸಂವಿಧಾನ ದಿನದ ಆಚರಣೆಯ ಮಹತ್ವದ ಬಗ್ಗೆ ಉಪನ್ಯಾಸ ನೀಡಿದರು, ಕರ್ನಾಟಕ ಬೆಟಾಲಿಯನ್ ಮಡಿಕೇರಿಯ ಎನ್. ಪಿ ಸಿ ಸೇವಾಧಿಕಾರಿ ಹವಾಲ್ದಾರ್ ಶುಭಮ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮಾನವಿಕ ವಿಭಾಗದ ಮುಖ್ಯಸ್ಥರಾದ ಪ್ರೊ. ಸುಬೈ ಸ್ವಾಗತಿಸಿದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ವಾಸುದೇವ ವಂದಿಸಿದರು ದ್ವಿತೀಯ ಬಿಎ ವಿದ್ಯಾರ್ಥಿನಿ ಪ್ರಿಯಾ ಡಿ ಸೋಜ ಅವರು ಸಂವಿಧಾನದ ಪೂರ್ವ ಪೀಠಿಕೆಯನ್ನು ನರದವರಿಗೆ ಬೋಧಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವನ್ನು ಕೊನೆಗೊಳಿಸಲಾಯಿತು.