6:41 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ನಿರ್ಜನ ಪ್ರದೇಶದಲ್ಲಿ 78ರ ಹರೆಯದ ವೃದ್ಧೆಯ ಮೇಲೆ ಅತ್ಯಾಚಾರ: ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

03/12/2022, 14:12

ನಿರ್ಜನ ಪ್ರದೇಶದಲ್ಲಿ 78ರ ಹರೆಯದ ವೃದ್ಧೆಯ ಮೇಲೆ ಅತ್ಯಾಚಾರ: ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಉಡುಪಿ(reporterkarnataka.com): ಸುಮಾರು 5 ವರ್ಷಗಳ ಹಿಂದೆ ಗುಜರಿ ಹೆಕ್ಕಿಕೊಂಡು ಬದುಕು ಸಾಗಿಸುತ್ತಿದ್ದ 78 ವರ್ಷ ಪ್ರಾಯದ ವೃದ್ದೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶ ನೀಡಿದೆ.
ಶಿವಮೊಗ್ಗ ಮೂಲದ ಇರ್ಫಾನ್ ಶಿಕ್ಷೆಗೆ ಗುರಿಯಾದ ಆರೋಪಿ. ಈತ ಉಡುಪಿಯ ಕೋಳಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದನು. 2017ರ ಜೂನ್ 5ರಂದು ಉಡುಪಿ ಪರಿಸರದಲ್ಲಿ ಗುಜರಿ ಮಾರಾಟ ಮಾಡಿಕೊಂಡು ಬದುಕುತ್ತಿದ್ದ ವೃದ್ಧೆಯನ್ನು ತೆಂಕಪೇಟೆ ಪರಿಸರದ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ನಡೆಸಿ ಆಕೆಯ ಬಳಿಯಿದ್ದ 30 ಸಾವಿರ ರೂ. ನಗದು ಹಾಗೂ ಆಭರಣ ದೋಚಿಕೊಂಡು ಹೋಗಿದ್ದನು ಎನ್ನಲಾಗಿದೆ. ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
2022ರ ಏ.7ರಂದು ನ್ಯಾಯಾಲಯ ಈ ಪ್ರಕರಣ ವಿಚಾರಣೆ ಆರಂಭಿಸಿದ್ದು, 18 ಸಾಕ್ಷಿಗಳ ಪೈಕಿ 15 ಸಾಕ್ಷಿಗಳ ಹೇಳಿಕೆ ಪಡೆದು ಆರೋಪಿ ಮೇಲಿನ ಆರೋಪ ಸಾಬೀತಾಗಿದೆ ಎಂದು ನ್ಯಾಯಾಧೀಶ ದಿನೇಶ್ ಹೆಗ್ಡೆ ಅಭಿಪ್ರಾಯಪಟ್ಟರು. ಅದರಂತೆ ಆರೋಪಿಗೆ ಅತ್ಯಾಚಾರ ಪ್ರಕರಣದಡಿ 10 ವರ್ಷ ಕಠಿಣ ಜೈಲುಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದರು. ಪ್ರಾಸಿಕ್ಯೂಷನ್ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಷನ್ ಜಯರಾಮ ಶೆಟ್ಟಿ ವಾದಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು