11:35 AM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ನರಹಂತಕ ಸಲಗ ವಿರುದ್ಧ ಕಾರ್ಯಾಚರಣೆ; ಮತ್ತೊಂದು ಪುಂಡಾನೆ ಸೆರೆ

03/12/2022, 19:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡು ಚಿಕ್ಕಮಗಳೂರಿನಲ್ಲಿ ವಿವಿಧ ಕಡೆ ಜನರ ಜೀವ ಬಲಿ ಹಾಗೂ ತೊಂದರೆ ನೀಡುತ್ತಿದ್ದ ಮತ್ತೊಂದು ಪುಂಡಾನೆ ಸೆರೆ ಹಿಡಿಯಲಾಗಿದೆ.
ಮೂಡಿಗೆರೆ ತಾಲೂಕಿನ ತಳವಾರ ಗ್ರಾಮದಲ್ಲಿ ಕಾಡಾನೆ ಸೆರೆ ಹಿಡಿಯಲಾಗಿದೆ. ಕಳೆದ ಮೂರು ತಿಂಗಳಲ್ಲಿ ಮೂವರನ್ನು ಬಲಿ ತೆಗೆದುಕೊಂಡಿದ್ದ ಕಾಡಾನೆಗಳು ಬಹಳಷ್ಟು ಭೀತಿಯನ್ನು ಜನರಲ್ಲಿ ಉಂಟು ಮಾಡಿತ್ತು. ಈ ಹಿನ್ನೆಲೆಯಲ್ಲಿ ಉಪಟಳ ನೀಡುತ್ತಿದ್ದ ಮೂರು ಕಾಡಾನೆಗಳನ್ನು ಸೆರೆಹಿಡಿಯಲು ರಾಜ್ಯ ಸರ್ಕಾರ ಅನುಮತಿ ನೀಡಿತ್ತು.

ಐದು ದಿನಗಳ ಹಿಂದೆ ಮೊದಲ ಯಶ ಕಂಡಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಕುಂಡ್ರ ಗ್ರಾಮದಲ್ಲಿ ಪುಂಡಾನೆ ಸೆರೆ ಹಿಡಿದಿದ್ದರು. ಇದೀಗ 2ನೇ ಕಾರ್ಯಾಚರಣೆಯಲ್ಲಿ ಮತ್ತೊಂದು ಪುಂಡಾನೆ ಬಲೆಗೆ ಬಿದ್ದಿದೆ. 5 ಸಾಕಾನೆಗಳಿಂದ ಸತತ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ನಡೆಸುತ್ತಿದೆ.ಮತ್ತೊಂದು ಪುಂಡಾನೆಗಾಗಿ ಕಾರ್ಯಾಚರಣೆ ಮುಂದುವರಿದಿದೆ.


ಸದ್ಯ ಎರಡು ಪುಂಡಾನೆ ಸೆರೆಯಿಂದ ಕಾಫಿನಾಡಿಗರು ಸ್ವಲ್ಪ ಮಟ್ಟಿಗೆ ನಿಟ್ಟಿಸಿರು ಬಿಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು