ಇತ್ತೀಚಿನ ಸುದ್ದಿ
ಕಾರ್ಕಳ: ಮನೆಯ ಬಾಗಿಲು ಮುರಿದು 4.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು
05/12/2022, 11:09

ಸಾಂದರ್ಭಿಕ ಚಿತ್ರ
ಕಾರ್ಕಳ(reporterkarnataka.com):
ಮನೆಯ ಅಡುಗೆ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಮನೆಯ ಗೋದ್ರೆಜ್ ನಲ್ಲಿ ಇರಿಸಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿಕೊಂಡು ಹೋಗಿರುವ ಘಟನೆ ಕಾರ್ಕಳ ತಾಲೂಕು ಕಲ್ಯಾ ಗ್ರಾಮದ ಕಂಗಿತ್ಲು ನಲ್ಲಿ
ನಡೆದಿದೆ.
ಕಲ್ಯಾ ಗ್ರಾಮದ ಕಂಗಿತ್ಲು ನಿವಾಸಿ ಉಷಾ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದ್ದು, ನಿನ್ನೆ ರಾತ್ರಿ ಯಾರೋ ಕಳ್ಳರು ಉಷಾ ಅವರ ಮನೆಯ ಅಡುಗೆ ಕೋಣೆಯ ಬಾಗಿಲಿನ ಬೀಗ ಮುರಿದು ಮನೆಯೊಳಗೆ ಪ್ರವೇಶಿಸಿದ್ದಾರೆ. ಬಳಿಕ ಮನೆಯ ಕೊಠಡಿಯಲ್ಲಿದ್ದ ಗೋದ್ರೆಜ್ ನಲ್ಲಿ ಇರಿಸಿದ್ದ ಸುಮಾರು 4.50 ಲಕ್ಷ ರೂ. ಮೌಲ್ಯದ ಸುಮಾರು 156 ಗ್ರಾಂ ತೂಕದ ಬಂಗಾರದ ಒಡವೆಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.