9:44 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕೋವಿಡ್ ಪಾಸಿಟಿವ್ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರ ಆಗಮಿಸಲು ಆಂಬುಲೆನ್ಸ್ ವ್ಯವಸ್ಥೆ: ಕೇರ್ ಸೆಂಟರ್ ನಲ್ಲಿ ಎಕ್ಸಾಂ

04/07/2021, 08:35

ಮಂಗಳೂರು(reporterkarnataka news): ಕೋವಿಡ್ ಪಾಸಿಟಿವ್ ಬಂದ ವಿದ್ಯಾರ್ಥಿಗಳನ್ನು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಅಂಬುಲೆನ್ಸ್ ಮೂಲಕ ಕರೆದು ತರುವ ವ್ಯವಸ್ಥೆ ಮಾಡಲಾಗಿದ್ದು, ಕೋವಿಡ್ ಕೇರ್ ಸೆಂಟರ್ ನಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದೆ.

ಕೋವಿಡ್ ಕೇರ್ ಸೆಂಟರ್ ನಲ್ಲಿ ಮೇಜು, ಕುರ್ಚಿ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುವುದು. ಪಿಪಿಇ ಕಿಟ್ ಹಾಕಿಕೊಂಡು ಅವರಿಗೆ ಪ್ರಶ್ನೆ ಪತ್ರಿಕೆ ನೀಡುವ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ ಬಹು ಆಯ್ಕೆ ಮಾದರಿಯ ಪ್ರಶ್ನೆ ಪತ್ರಿಕೆಗಳನ್ನು ರೂಪಿಸಲಾಗಿದ್ದು, ಒಎಮ್ ‌ಆರ್ ಶೀಟ್ ಗಳ ಬಗ್ಗೆ ವಿದ್ಯಾರ್ಥಿಗಳಿಗೆ ಯಾವುದೇ ಗೊಂದಲ ಹಾಗೂ ಹೆದರಿಕೆ ಬಾರದಂತೆ ಅವರಲ್ಲಿ ಜಾಗೃತಿ ಮೂಡಿಸಲು ಸೂಚಿಸಲಾಗಿದೆ.

ಪರೀಕ್ಷೆಗಳ ನಡುವೆ ಎರಡು ದಿನಗಳ ಅಂತರವಿದ್ದು ಈ ಸಂದರ್ಭದಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ರಚಿಸಲಾಗಿರುವ ಪರೀಕ್ಷಾ ಕೊಠಡಿಗಳನ್ನು ಸಂಪೂರ್ಣವಾಗಿ ಸ್ಯಾನಿಟೈಜ್ ಮಾಡಲಾಗುವುದು. ಪ್ರಮುಖವಾಗಿ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗದಂತೆ ಕಟ್ಟುನಿಟ್ಟಿನ ಎಚ್ಚರವಹಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಬಾರಿ ಪರೀಕ್ಷಾ ಕೇಂದ್ರಕ್ಕೆ ಎರಡು ಗಂಟೆಗಳ ಮುಂಚಿತವಾಗಿ ಆಗಮಿಸಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು