8:30 AM Wednesday17 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಮಣಿಪಾಲ: ಮತ್ಸ್ಯಗಂಧ ರೈಲಿನಲ್ಲಿ 40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

08/12/2022, 11:37

ಮಣಿಪಾಲ(reporterkarnataka.com): ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್ ನಲ್ಲಿದ್ದ 40 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳು ಮತ್ತು ಡೈಮಂಡ್ ಆಭರಣಗಳನ್ನು ಕಳವು ಮಾಡಿರುವ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾರಾಷ್ಟ್ರ ಮುಲುಂದು ವೈಶಾಲಿ ನಗರದ ದೀಪಾ ರೈ(44) ಅವರ ಚಿನ್ನಾಭರಣ ಕಳೆದುಕೊಂಡ ಮಹಿಳೆ. ಇವರು ಡಿ.6ರಂದು ಉಡುಪಿ ಕಟಪಾಡಿಯಲ್ಲಿ ನಡೆಯಲಿರುವ ಸಂಬಂಧಿಕರ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಡಿ.5ರಂದು ಅಕ್ಕ, ಭಾವ, ಅಮ್ಮ ಹಾಗೂ ತಂದೆಯೊಂದಿಗೆ ಮುಂಬಯಿಯ ಪನ್ ವೇಲಿನಿಂದ ಮತ್ಸ್ಯಗಂದ ರೈಲಿನಲ್ಲಿ ಉಡುಪಿಗೆ ಹೊರಟಿದ್ದರು ಎನ್ನಲಾಗಿದೆ.

ಮದುವೆ ಕಾರ್ಯಕ್ರಮದಲ್ಲಿ ಧರಿಸುವುದಕ್ಕಾಗಿ ಚಿನ್ನಾಭರಣಗಳನ್ನು 3 ಬ್ಯಾಗ್ ಗಳಲ್ಲಿ ಸೀರೆಯ ಮಧ್ಯ ಭಾಗದಲ್ಲಿ ಇಟ್ಟುಕೊಂಡಿದ್ದರು. ಡಿ.6ರಂದು ಬೆಳಿಗ್ಗೆ ಸುಮಾರು 5 ಗಂಟೆಗೆ ರೈಲು ಕುಂದಾಪುರ ಸ್ಟೇಷನ್ ತಲುಪಿದ್ದು, ಆಗ ಉಡುಪಿಯಲ್ಲಿ ಇಳಿಯುವುದಕ್ಕೆ ಇವರು ಬ್ಯಾಗ್ ಗಳನ್ನು ರೈಲಿನ ಬಾಗಿಲಿನ ಬಳಿ ತಂದು ಇರಿಸಿದ್ದರು.
ರೈಲು ಮುಂಜಾನೆ 5.40ರ ಸುಮಾರಿಗೆ ಉಡುಪಿಯ ರೈಲು ಸ್ಟೇಷನ್ ಗೆ ಬಂದಿದ್ದು, ಬಳಿಕ ರೈಲಿನಿಂದ ಇಳಿದು ಕಟಪಾಡಿಯ ಮನೆಗೆ ಹೋಗಿದ್ದಾರೆ. ಮನೆಗೆ ಹೋಗಿ ಬ್ಯಾಗ್ ಪರಿಶೀಲಿಸಿದಾಗ ಆಭರಣಗಳು ಕಳವಾಗಿರುವುದು ಗೊತ್ತಾಗಿದೆ. ಕಳವಾಗಿರುವ ಚಿನ್ನಾಭರಣಗಳ ಅಂದಾಜು ತೂಕ 850 ಗ್ರಾಂ ಆಗಿದ್ದು, ಒಟ್ಟು ಮೌಲ್ಯ 34 ಲಕ್ಷ ರೂ. ಆಗಬಹುದು ಹಾಗೂ ಕಳವಾದ ಡೈಮಂಡ್ ನ ಮೌಲ್ಯ 6 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಇವುಗಳ ಒಟ್ಟು ಮೌಲ್ಯ ಸುಮಾರು 40 ಲಕ್ಷ ರೂ. ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು