5:50 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಸುರತ್ಕಲ್: ಮಹಿಳೆಯರ ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮೆರಾ ಪತ್ತೆ; ಒಬ್ಬನ ಬಂಧನ

08/12/2022, 12:54

ಸಾಂದರ್ಭಿಕ ಚಿತ್ರ
ಸುರತ್ಕಲ್ (reporterkarnataka.com) : ಸ್ಕ್ಯಾನಿಂಗ್ ಮಾಡಲು ಬರುವ ಮಹಿಳೆಯರು ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮೆರಾ ಇರಿಸಿದ ಘಟನೆ ಸುರತ್ಕಲ್ ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಆರೋಪದಲ್ಲಿ 21 ವರ್ಷದ ನರ್ಸಿಂಗ್‌ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ 21ರ ಹರೆಯದ
ನರ್ಸಿಂಗ್‌ ವಿದ್ಯಾರ್ಥಿ ಪವನ್‌ ಈ ಕೃತ್ಯವೆಸಗಿದ ಆರೋಪಿ ಎಂದು ಗುರುತಿಸಲಾಗಿದೆ.

ಮೂಲತಃ ಕಲಬುರಗಿಯವನಾದ ಪವನ್‌ ಬಜಪೆಯಲ್ಲಿ ವಾಸ್ತವ ಮಾಡುತ್ತಿದ್ದ. ಆಸ್ಪತ್ರೆಗೆ ತಪಾಸಣೆಗೆ ಬಂದವರು ಸ್ಕ್ಯಾನಿಂಗ್‌ಗೆ ಒಳಗಾಗುವ ಮುನ್ನ ಬಟ್ಟೆ ಬದಲಾಯಿಸಲು ಬರುವ ಕೊಠಡಿಯಲ್ಲಿ ಯಾರಿಗೂ ಗೊತ್ತಾಗದ ರೀತಿಯಲ್ಲಿ ಕ್ಯಾಮೆರಾ ಅಳವಡಿಸಿದ್ದ.

ಸ್ಕ್ಯಾನಿಂಗ್‌ ಮಾಡಿಸಲು ಬಂದಿದ್ದ ಯುವತಿಯೊಬ್ಬರು ಉಡುಪು ಬದಲಾಯಿಸುವ ಮೊದಲು ಕೊಠಡಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಮೂಲೆಯಲ್ಲಿ ರಹಸ್ಯ ಕ್ಯಾಮೆರಾ ಇರುವುದು ಪತ್ತೆಯಾಗಿದೆ. ಅವರು ಈ ವಿಷಯವನ್ನು ವೈದ್ಯರ ಗಮನಕ್ಕೆ ತಂದಿದ್ದಾರೆ. ತನಿಖೆ ನಡೆಸಿದಾಗ ಪವನ್‌ ಕುಮಾರ್‌ ಕ್ಯಾಮರಾ ಇಟ್ಟಿರುವುದು ಪತ್ತೆಯಾಗಿದೆ. ಸುರತ್ಕಲ್‌ ಠಾಣೆಗೆ ಅವನ ವಿರುದ್ಧ ದೂರು ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು