11:45 AM Monday23 - December 2024
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಸಿ.ಟಿ. ರವಿಗೆ ಭಾರೀ ಸ್ವಾಗತ; ಮೆರವಣಿಗೆ ಸಿ. ಟಿ. ರವಿ ಸದಸ್ಯತ್ವ ಅನರ್ಹಗೊಳಿಸಿ: ಮಲೆನಾಡು ಪ್ರದೇಶಾಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ… ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ… ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು…

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

08/12/2022, 20:54

ಪುತ್ತೂರು(reporterkarnataka.com): ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನ 2022-23 ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಕಾಲೇಜಿನ ಬೆಳ್ಳಿಹಬ್ಬ ಸಭಾಭವನದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುಬ್ಬಪ್ಪ ಕೈಕಂಬ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು,.

ಅವರು ಈ ಸಂದರ್ಭದಲ್ಲಿ ಮಾತನಾಡಿ, ಒಂದು ಹಣತೆಯಿಂದ ನಾವಿರಾರು ಹಣತೆಗಳನ್ನು ಹಚ್ಚಬಹುದಾಗಿದೆ. ಹಾಗೆಯೇ ನಮ್ಮ ಜ್ಞಾನವನ್ನು ಇತರರೊಂದಿಗೆ ಹಂಚಿದಲ್ಲಿ ಮಾತ್ರ ಅದು ವೃದ್ಧಿಯಾಗುತ್ತದೆ. ಜ್ಞಾನವನ್ನು ತಲೆಯಲ್ಲಿಟ್ಟು ಮೆರೆಯದೆ ಹೃದಯದಲ್ಲಿಟ್ಟು ವಿನಮ್ರವಾಗಿ ನಡೆದುಕೊಂಡರೆ ಜೀವನ ಸಾರ್ಥಕವಾಗುವುದು. ನಾಯಕರು ಅನುಯಾಯಿಗಳನ್ನು ಸೃಷ್ಟಿಸುವ ಬದಲು ನಾಯಕರನ್ನು ಸೃಷ್ಟಿಸಬೇಕು. ವ್ಯಕ್ತಿಗಳನ್ನು ಹಾಗೂ ವ್ಯಕ್ತಿತ್ವಗಳನ್ನು ಉಳಿಸಿ ಬೆಳೆಸುವಲ್ಲಿ ವಿದ್ಯಾಸಂಸ್ಥೆಗಳು ಮಹತ್ತರ ಪಾತ್ರ ವಹಿಸುತ್ತವೆ. ಯುವಕರು ಒಂದು ಹೆಜ್ಜೆ ಮುಂದೆ ಇಡುವ ಮುನ್ನ ಇಟ್ಟ ಹೆಜ್ಜೆ ಸರಿಯಾಗಿದೆಯೇ ಎಂದು ಪರಾಮರ್ಶಿಸಬೇಕು. ಬದುಕಿನ ಜಂಜಾಟಗಳ ನಡುವೆ ನಮಗೆ ಬರಬಹುದಾದ ಅದ್ಭುತ ಅವಕಾಶಗಳನ್ನು ಕಳೆದುಕೊಳ್ಳಬಾರದು ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ವಂ| ಡಾ. ‘ಆಂಟನಿ ಪ್ರಕಾಶ್ ಮೊಂತೆರೋ ಅವರು ವಿದ್ಯಾರ್ಥಿಸಂಘದ ಎಲ್ಲಾ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಗೌರವಾನ್ವಿತ ಅತಿಥಿಯಾದ ಮಾಯ್ ದೆದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಮೌರಿಸ್ ಮಸ್ಕರೇಞಸ್ ಅವರು ವಿದ್ಯಾರ್ಥಿಸಂಘದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ ಎ. ಜಗಜೀವನ್ ದಾಸ್ ಇವರು ವಿದ್ಯಾರ್ಥಿ ಸಂಘದ ಚಟುವಟಿಕೆಗಳಿಗೆ ಶುಭಹಾರೈಸಿದರು.
ಕಾಲೇಜಿನ ಸಂಚಾಲಕರಾದ ಅತಿ ವಂ| ಜೆರೋಮ್ ಲಾರೆನ್ ಮಸ್ಕರೇಞಸದ ದವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ” ವಿದ್ಯಾರ್ಥಿ
ಸಮೂಹಕ್ಕೆ ಒಳಿತನ್ನು ಮಾಡಲು ನಾಯಕರನ್ನು ಚುನಾಯಿಸಲಾಗಿದೆ, ನೀವು ಯಾರಾದರೊಬ್ಬ ವ್ಯಕ್ತಿಯನ್ನು ಪ್ರೀತಿಸಿದಲ್ಲಿ ಅವರ ಒಳಿತು
ಹಾಗೂ ಸಂತೋಷಕ್ಕಾಗಿ ಸದಾ ಶ್ರಮಿಸುತ್ತೀರಿ. ನಿಮ್ಮ ಹೆತ್ತವರನ್ನು ಪ್ರೀತಿಸಿದಂತೆಯೇ ಕಲಿತ ವಿದ್ಯಾ ಸಂಸ್ಥೆಯನ್ನೂ ಪ್ರೀತಿಸಿರಿ, ನಾಯಕರು
ತಮ್ಮ ಜವಾಬ್ದಾರಿಗಳನ್ನು ಪ್ರೀತಿಯಿಂದಲೇ ನಿರ್ವಹಿಸಿದಲ್ಲಿ ಸಂಸ್ಥೆಯನ್ನು ಸುಲಭವಾಗಿ ಮುನ್ನಡೆಸಬಹುದಾಗಿದೆ” ಎಂದು ಹೇಳಿದರು.

ಕಾಲೇಜಿನ ಲಲಿತ ಕಲಾಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿದರು, ವಿದ್ಯಾರ್ಥಿ ಸಂಘದ ನಾಯಕ ಮಹಮ್ಮದ್ ಆಶಿಕ್ ಸ್ವಾಗತಿಸಿದರು.


ಕಾರ್ಯದರ್ಶಿ ಅಮಶ್ರೀ ಹಾಗೂ ಅದಿಗಳನ್ನು ಪರಿಚಯಿಸಿದರು, ತೃತೀಯ ಬಿಸಿಯ ವಿದ್ಯಾರ್ಥಿ ಜೋಪ್ ವಿಸ್ಟನ್ ಟೈಟಸ್ ಡಯಾಸ್ ಅದಿಗಳನ್ನು ಹೋಗುಚ್ಛ ನೀಡಿ ಸ್ವಾಗತಿಸಿದರು, ಜತೆ ಕಾರ್ಯದರ್ಶಿ ಶಿವಾನಿ ವಂದಿಸಿದರು, ಹಾಗೂ ತೃತೀಯ ಬಿಎಸ್ಸಿ ವಿದ್ಯಾರ್ಥಿನಿ ರ ಅಂಚನ್ ಕಾರ್ಯಕ್ರಮ ವಿರೂಪಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಡಾ|ಚಂದ್ರಶೇಖರ್ ಕೆ ಹಾಗೂ ಭಾರತಿ ಎಚ್. ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ವಂ| ಅಶೋಕ್ ಪಾಯಸ್ ಕ್ರಾಸ್ತಾ, ಸಂತ ಫಿಲೋಮಿನಾ ಪ್ರೌಢಶಾಲೆಯ ಮುಖ್ಯೋಪಾ ಧ್ಯಾಯರಾದ ಶ್ರೀಮತಿ ಕಾರ್ಮಿನ್ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ವಿ ಜೆ ಫೆರ್ನಾಂಡಿಸ್ ಹಾಗೂ ಕ್ಷೇವಿಯರ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು