ಇತ್ತೀಚಿನ ಸುದ್ದಿ
ಎಸ್ಸೆಸ್ಸೆಲ್ಸಿ ಪರೀಕ್ಷೆ: ದ.ಕ.ಜಿಲ್ಲೆಯಲ್ಲಿ 179 ಪರೀಕ್ಷಾ ಕೇಂದ್ರ, 2718 ಕೊಠಡಿಗಳು, 32,567 ವಿದ್ಯಾರ್ಥಿಗಳು
04/07/2021, 08:55
ಮಂಗಳೂರು(reporterkarnataka news);
ರಾಜ್ಯಮಟ್ಟದಲ್ಲಿ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ 179 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 32,567 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
2 ದಿನಗಳ ಕಾಲ ಪರೀಕ್ಷೆ ನಡೆಯಲಿರುವ ಪರೀಕ್ಷೆಯಲ್ಲಿ ಒಂದು ಕೊಠಡಿಯಲ್ಲಿ 12 ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಆದರೆ ಕಳೆದ ಬಾರಿ 18 ಮಕ್ಕಳಿಗೆ ಒಂದು ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು.
ಜಿಲ್ಲೆಯಲ್ಲಿ ಒಟ್ಟು 32,567 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲು ಎದುರಿಸಲಿದ್ದಾರೆ, ಕೋವಿಡ್ ಲಕ್ಷಣಗಳು ಬಂದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಹೆಚ್ಚುವರಿಯಾಗಿ ಆಯಾ ಪರೀಕ್ಷಾ ಕೇಂದ್ರಗಳಲ್ಲಿ ಎರಡು ಕೊಠಡಿಗಳನ್ನು ಕಾಯ್ದಿರಿಸಲಾಗಿದೆ, ಒಟ್ಟು 3,708 ಸಿಬ್ಬಂದಿಗಳು ಸಜ್ಜಾಗಿದ್ದಾರೆ, 2,718 ಕೊಠಡಿಗಳನ್ನು ಸಜ್ಜುಗೊಳಿಸಲಾಗುತ್ತಿದೆ.