6:48 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ಭಾರತೀಯ ಭಾಷೆಗಳ ಬಗ್ಗೆ ಪ್ರೀತಿ, ಗೌರವ, ಅಭಿಮಾನವಿರಲಿ: ಪರಶುರಾಮ್ ಜಿ. ಮಾಳಗೆ

09/12/2022, 23:26

ಮಂಗಳೂರು(reporterkarnata.com): ಭಾರತೀಯ ಭಾಷಾ ದಿವಸದ ಅಂಗವಾಗಿ ಕೆನರಾ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಹಿಂದಿ ಮತ್ತು ಸಂಸ್ಕೃತ ಸಂಘಗಳ ಜಂಟಿ ಆಶ್ರಯದಲ್ಲಿ “ಭಾರತೀಯ ಭಾಷೆ – ಮಹತ್ವ”ದ ಕುರಿತಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಮುಖ್ಯ ಅತಿಥಿಯಾಗಿದ್ದ ಬೆಸೆಂಟ್ ಮಹಿಳಾ ಮಹಾವಿದ್ಯಾಲಯದ ಡಾ. ಪರಶುರಾಮ್ ಜಿ. ಮಾಳಗೆ ಅವರು ಮಾತನಾಡಿ, ವಿವಿಧ ಭಾಷೆಗಳನ್ನು ಆಡುವ, ವಿವಿಧ ಆಚಾರ, ವಿಚಾರ ಸಂಪ್ರದಾಯಗಳಿದ್ದರೂ ನಾವೆಲ್ಲರೂ ಒಂದೇ, ನಾವೆಲ್ಲರೂ ಭಾರತೀಯರು. ಭಾಷೆ ಯಾವುದೇ ಇರಲಿ, ಪ್ರತಿಯೊಂದು ಭಾಷೆಯಲ್ಲಿ ಪ್ರೀತಿ, ಗೌರವವನ್ನು ಇಟ್ಟುಕೊಂಡು ಮುನ್ನಡೆದಲ್ಲಿ ವ್ಯಕ್ತಿತ್ವವು ವಿಕಸನಗೊಳ್ಳುವುದು. ಭಾಷೆಯು ನಮ್ಮ ಮನಸ್ಸಿನ ಭಾವನೆಗಳನ್ನು ಪರಸ್ಪರ ವ್ಯಕ್ತಪಡಿಸುವ ಒಂದು ಒಳ್ಳೆಯ ಸಾಧನವಾಗಿರುವುದು ಎಂದು ನುಡಿದರು. ಕಾಲೇಜಿನ ಪ್ರಾಂಶುಪಾಲೆ ಡಾ. ಪ್ರೇಮಲತಾ ವಿ. ಅವರು ಅಧ್ಯಕ್ಷತೆ ವಹಿಸಿದ್ದು ಭಾಷೆ ಯಾವುದೇ ಇರಲಿ ಅದರ ಬಗ್ಗೆ ಪ್ರೀತಿ, ಅಭಿಮಾನ, ಗೌರವವನ್ನು ಇಟ್ಟುಕೊಳ್ಳುವ ಅಗತ್ಯತೆ ಇದೆ ಎಂದರು.

ಕಲ್ಪೇಶ್ ತೆಂಡಲ್ ಅತಿಥಿಗಳನ್ನು ಪರಿಚಯಿಸಿ, ಸ್ವಾಗತಿಸಿದರು.
ಮನಸ್ವಿ ಮತ್ತು ಸೊನಾಲಿ ಪ್ರಾರ್ಥಿಸಿದರು. ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಕಲ್ಪನಾ ಪ್ರಭು, ಹಿಂದಿ ಸಂಘದ ಸಂಯೋಜಕಿ ಸುಜಾತಾ ಜಿ. ನಾಯಕ್ ಹಾಗೂ ಸಂಸ್ಕೃತ ವಿಭಾಗದ ಮುಖ್ಯಸ್ಥೆ ಹಾಗೂ ಸಂಸ್ಕೃತ ಸಂಘದ ಸಂಯೋಜಕಿ ಚೇತನಾ, ಸ್ವಾತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅನುಶ್ರೀ ವಂದಿಸಿ, ಶೃಜನ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು