4:00 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಕೋಲಾರ: ರಕ್ತ ಚಂದನ, ಶ್ರೀಗಂಧ ಬೆಳೆಯುವ ಪ್ರದೇಶದ ರಕ್ಷಣೆಗೆ ವಿಶೇಷ ಯೋಜನೆಯಡಿ ಅಭಿಯಾನ 

04/07/2021, 09:10

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

Info.reporterkarnataka@gmail.com

ರಕ್ತ ಚಂದನ ಗಿಡಗಳನ್ನು ಸಂರಕ್ಷಣಾಭಿವೃದ್ಧಿ ಮಾಡಿ. ಕೆರೆಗಳ ಪಕ್ಕದಲ್ಲಿರುವ ಜಲಚರ ಗಿಡಗಳು ಮತ್ತು ಕೆರೆಗಳಲ್ಲಿರುವ ಜಲಚರ ಪ್ರಾಣಿಗಳನ್ನು ಉಳಿಸಿಕೊಂಡು ಕೆರೆಗಳ ಸ್ವರೂಪ ಕಾಪಾಡಿಕೊಂಡು ಅರಣ್ಯ ರಕ್ಷಣೆ ಮಾಡಬೇಕು ಎಂದು ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಹೇಳಿದರು. 

ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅರಣ್ಯ ಜೀವವೈವಿಧ್ಯ ಪರಿಸರ , ಕೆರೆ ಸಂರಕ್ಷಣೆ ಕುರಿತು ಸಮಾಲೋಚನೆ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಸಂಬಂಧಿಸಿದ ಎಲ್ಲಾ ಕೆರೆಗಳ ಸುಂದರೀಕರಣ ಎಂಬ ಕಾರ್ಯಕ್ರಮದ ಮೂಲಕ ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗುವುದು. ರಕ್ತ ಚಂದನ ಮತ್ತು ಶ್ರೀಗಂಧ ನೈಸರ್ಗಿಕವಾಗಿ ಬೆಳೆಯುವ ಪ್ರದೇಶದ ರಕ್ಷಣೆಗೆ ವಿಶೇಷ ಯೋಜನೆಯಡಿಯಲ್ಲಿ ಅಭಿಯಾನ ಮಾಡಲಾಗುವುದು. ಚೌಗು ಪ್ರದೇಶಗಳ ರಕ್ಷಣೆ ಮಾಡಿ ಹಾಗೂ ಅವುಗಳನ್ನು ಅಭಿವೃದ್ಧಿ ಪಡಿಸಬೇಕು ಎಂದು ತಿಳಿಸಿದರು. 
ಪಂಚಾಯತ್ ರಾಜ್ , ನಗರಸಭೆ , ಅರಣ್ಯ ಇಲಾಖೆಗಳು ಸೇರಿ ಹಲವು ಇಲಾಖೆಗಳು ಮುಂದಾಗಿ ಕೆರೆಗಳ ಅಭಿವೃದ್ಧಿಗೆ ಕೈಜೋಡಿಸಿ ಜಿಲ್ಲೆಯನ್ನು ಜೀವ ವೈವಿಧ್ಯತೆಯ ಜಿಲ್ಲೆಯನ್ನಾಗಿಸಬೇಕು . ಕೋಲಾರದ ಅಂತರಗಂಗೆ ಮತ್ತು ಶ್ರೀನಿವಾಸಪುರದ ರಾಯಲ್ಪಾಡು ಹತ್ತಿರವಿರುವ ಬೆಟ್ಟ , ಗುಡ್ಡಗಾಡು ಪ್ರದೇಶಗಳಲ್ಲಿರುವ ಜನರಿಗೆ ಹೆಚ್ಚಿನ ಆದ್ಯತೆ ಕೊಟ್ಟು ಸರ್ಕಾರದಿಂದ ಬರುವ ಎಲ್ಲಾ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಅವಕಾಶಗಳನ್ನು ಕಲ್ಪಿಸಿಕೊಡಬೇಕು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು