12:57 PM Sunday23 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ

ಇತ್ತೀಚಿನ ಸುದ್ದಿ

ಮುಂಬರುವ ಜಿಪಂ, ತಾಪಂ ಚುನಾವಣೆ: ಮಸ್ಕಿಯಲ್ಲಿ ಕೈ ಟಿಕೆಟ್ ಭಾರಿ ಬೇಡಿಕೆ; ಈಗಾಗಲೇ ಕಾದಾಟ ಶುರು !

04/07/2021, 09:20

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿದ್ದಂತೆ ಕಾಂಗ್ರೆಸ್ ಪಕ್ಷದಲ್ಲಿ ಬಿನ್ನಮತ ಶುರುವಾಗಿದೆ. ಯಾರಿಗೆ ಟಿಕೆಟ್ ಕೊಡುವುದು, ಯಾರಿಗೆ ಕೊಡದಿರುವುದು ಎಂಬ ಕುರಿತು ತಲೆನೋವು ಹೆಚ್ಚಾಗಿದೆ. 

ಮಸ್ಕಿ ವಿಧಾನಸಭೆಗೆ ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಸಹಜವಾಗಿ ಕಾಂಗ್ರೆಸ್ ಟಿಕೆಟ್ ಗೆ ಭಾರಿ ಬೇಡಿಕೆ ಉಂಟಾಗಿದೆ.ಮೆದಿಕಿನಾಳ ಜಿಲ್ಲಾ ಪಂಚಾಯತ್ ಆಕಾಂಕ್ಷಿಯಾಗಿ ಅಭ್ಯರ್ಥಿ ಗಳು ನಾ ಮುಂದೆ ತಾ ಮುಂದೆ ಎನ್ನುವ ರೀತಿ ಜಾಲತಾಣದಲ್ಲಿ ಪ್ರಚಾರದಲ್ಲಿ ತೊಡಗಿದ್ದಾರೆ.

ಪಕ್ಷದಲ್ಲಿ ಎರಡು ವರ್ಷಗಳಿಂದ ಸತತವಾಗಿ ಸೇವೆ ಮಾಡಿದ್ದೇವೆ. ನಮಗೆ ಪಕ್ಷದವರು ಕೈಬಿಡುವುದಿಲ್ಲ ಎಂದು ಒಬ್ಬರು ಹೇಳಿದರೆ, ಇನ್ನೊಬ್ಬರು

ನಮ್ಮ ನಾಯಕರಿಗೆ ಟಿಕೆಟ್ ನೀಡದಿದ್ದಲ್ಲಿ ಮುಂದೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎನ್ನುವ ಎಚ್ಚರಿಕೆಯನ್ನೂ ನೀಡುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು