11:39 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ತಹಶೀಲ್ದಾರ್ ಮನೆಗೆ ಕನ್ನ ಹಾಕಿದ ಖದೀಮರು: 19.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

12/12/2022, 13:01

ರಾಹುಲ್ ಅಥಣಿ ಬೆಳಗಾವಿ

info.reporter Karnataka@gmail.com

ಬೆಳಗಾವಿ ಜಿಲ್ಲೆಯ ಗೋಕಾಕದಲ್ಲಿ ತಹಶೀಲ್ದಾರರ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಘಟನೆ ನಡೆದಿದೆ.
ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರ ವಸತಿ ಗೃಹದಲ್ಲಿ ಶನಿವಾರ ತಡರಾತ್ರಿ ಕಳ್ಳತನ ನಡೆದಿದ್ದು, ಸುಮಾರು 400 ಗ್ರ ಚಿನ್ನವನ್ನು ಕಳವು ಗೈಯಲಾಗಿದೆ. ತಹಶೀಲ್ದಾರ ಅವರು ಕೆಲಸದ ನಿಮಿತ್ಯ ಮೈಸೂರಿಗೆ ತೆರಳಿದ್ದು, ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ಬಗ್ಗೆ ಖಚಿತಪಡಿಸಿಕೊಂಡಿದ್ದ ಕಳ್ಳರು ಕಳ್ಳತನ ನಡೆಸಿದ್ದಾರೆ.


ಕಬ್ಬಿಣದ ಕಟ್ಟರ್ ಸಹಾಯದಿಂದ ಮನೆಯ ಕೀಲಿ ಕೈಯನ್ನು ಕತ್ತರಿಸಿ ಮನೆಯೊಳಗೆ ನುಗ್ಗಿದ ಕಳ್ಳರು ಮನೆಯೊಳಗೆ ಜಾಲಾಡಿ ಕಪಾಟಿನಲ್ಲಿದ್ದ ಸುಮಾ ರು 19.5 ಲಕ್ಷ ರೂ. ಮೌಲ್ಯದ 4 ತೊಲಿ ಗಂಟನ, 4 ತೊಲಿ ಬಂಗಾರದ ಬಿಲ್ವರ 1 ಜೊತೆ, ನಕ್ಲಸ್ 3 10 ತೊಲಿ, ಬಂಗಾರದ ಪಾಟಿ 1 ಜೊತೆ 5 ತೊಲಿ, 2 ಲಾಕೇಟ್ 5 ತೊಲಿ, 4 ಬಂಗಾರದ ಉಂಗರು 10 ತೊಲಿ, ಕಿವಿಯೊಲೆ 2 ಜೊತೆ 2 ತೊಲಿ, ಗಟ್ಟಿ ಬಂಗಾರ 10 ತೊಲಿ ಒಟ್ಟು 40.1/2 ತೊಲಿ ಬಂಗಾರ ಹಾಗೂ 5,500 ರೂ ನಗದು ಹಣ ದೋಚಿ ಕಳ್ಳರು ಫರಾರಿಯಾಗಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು