7:15 AM Thursday3 - April 2025
ಬ್ರೇಕಿಂಗ್ ನ್ಯೂಸ್
EX CM | ವಕ್ಸ್ ಆಸ್ತಿ ಕಬಳಿಸಿರುವುದನ್ನು ಮುಚ್ಚಿ ಹಾಕಲು ಕಾಂಗ್ರೆಸ್‌ ತಿದ್ದುಪಡಿ… Chikkamagaluru | ಅನ್ನದಾತ ಆತ್ಮಹತ್ಯೆ: ಕಿರುಕುಳ ನೀಡಿದ ಬ್ಯಾಂಕ್ ಎದುರು ರೈತನ ಪಾರ್ಥಿವ… Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ:… Delhi | ರಾಜ್ಯದ್ದು “ಜನ-ಕರ” ವಸೂಲಿ ಸರಕಾರ: ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವ… Chikkamagaluru | ಕೆಮ್ಮಣ್ಣುಗುಂಡಿ ಸಮೀಪ ವಿದ್ಯುತ್ ಶಾಕ್ ನಿಂದ ಕಾಡಾನೆ ದಾರುಣ ಸಾವು ಕೂಡ್ಲಿಗಿ: ರಂಜಾನ್ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಭಾಗಿ ಭಾಗಿ Kolara | ಶ್ರೀನಿವಾಸಪುರದಲ್ಲಿ ಸಂಭ್ರಮ- ಸಡಗರದಲ್ಲಿ ಈದ್-ಉಲ್-ಫಿತರ್ ಆಚರಣೆ: ಸಾಮೂಹಿಕ ಪ್ರಾರ್ಥನೆ PDO | ಮಾದರಿ ಗ್ರಾಮ ಪಂಚಾಯತಿ ನಿರ್ಮಾಣದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ… Bangalore | ಸಬಲೀಕರಣ ಜತೆಗೆ ಮಹಿಳಾ ಸುರಕ್ಷತೆ: ‘ಬಿ.ಸೇಫ್’ ಸಮೀಕ್ಷಾ ವರದಿ ಬಿಡುಗಡೆ Bangalore | ಬೇಡಿಕೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಬ್ಯಾಂಕ್ ನಿವೃತ್ತರ ಒಕ್ಕೂಟಗಳ…

ಇತ್ತೀಚಿನ ಸುದ್ದಿ

ರಾಜ್ಯದ ಎಲ್ಲ 224 ಕ್ಷೇತ್ರ ನಮ್ಮ ಟಾರ್ಗೆಟ್, ಸಿಎಂ ಅಭ್ಯರ್ಥಿ ಬಗ್ಗೆ ಯಾರು ಮಾತನಾಡಬಾರದು: ಡಿ.ಕೆ. ಶಿವಕುಮಾರ್

04/07/2021, 18:43

ಬೆಂಗಳೂರು(reporterkarnataka news):

ಕಾಂಗ್ರೆಸ್ ಪಕ್ಷಕ್ಕೆ  ದೇಶದ ಇತಿಹಾಸದಲ್ಲೇ ಪುರಾತನ ಇತಿಹಾಸವಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಅಡಿಪಾಯ ಗಟ್ಟಿಯಾಗಿದೆ. ರಾಜ್ಯದ 224 ಕ್ಷೇತ್ರಗಳಲ್ಲಿ 224 ಸ್ಥಾನಗಳನ್ನು ಗೆಲ್ಲುವುದು ನಮ್ಮ ಟಾರ್ಗೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವುದೇ ನನ್ನ ಗುರಿ ಎಂದು ಹೇಳಿದ ಅವರು, ರಾಜ್ಯ ಬಿಜೆಪಿ ಸರ್ಕಾರ ಉತ್ತಮ ಆಡಳಿತ ನೀಡುವಲ್ಲಿ, ಜನರ ಸಂಕಷ್ಟಕ್ಕೆ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದರು.

ಮುಖ್ಯಮಂತ್ರಿಗಳಿಂದ ಹಿಡಿದು ಸಚಿವರವರೆಗೂ ಭ್ರಷ್ಟಾಚಾರ ತಾರಕಕ್ಕೇರಿದೆ. ಸಚಿವರ ಪಿಎಗಳಿಂದ ಹಿಡಿದು ತಾಲೂಕು ಮಟ್ಟದ ತಹಶೀಲ್ದಾರ್ ಕಚೇರಿವರೆಗೂ ಲಂಚಕ್ಕೆ ಬೇಡಿಕೆ ಇಡಲಾಗುತ್ತಿದೆ. ಬಿಜೆಪಿ ಆಡಳಿತಕ್ಕೆ ಜನರು ಹೈರಾಣಾಗಿದ್ದಾರೆ ಎಂದು ಅವರು ಕಿಡಿಕಾರಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಕೆಪಿಸಿಸಿ ಅಧ್ಯಕ್ಷನಾಗಿ ನಾನು ಯಾರೊಬ್ಬರ ಇಂತಹ ಹೇಳಿಕೆಗಳಿಗೂ ಮಹತ್ವ ಕೊಡಲ್ಲ. ಶಾಸಕ ಜಮೀರ್ ಅಹ್ಮದ್ ಹೇಳಿಕೆಯಿಂದ ಹಿಡಿದು ಸಂಸದ ಡಿ.ಕೆ ಸುರೇಶ್ ಹೇಳಿಕೆವರೆಗೂ ಯಾರೊಬ್ಬರ ಹೇಳಿಕೆಗೂ ಪ್ರತಿಕ್ರಿಯಿಸಲ್ಲ. ಪಕ್ಷದ ಮುಖಂಡರು ವೈಯಕ್ತಿಕ ಅಭಿಪ್ರಾಯಗಳನ್ನು ಕೊಡುವ ಬದಲು ತಮ್ಮ ತಮ್ಮ ಕ್ಷೇತ್ರಗಳಿಗೆ ತೆರಳಿ ಜನರ ಸಂಕಷ್ಟಗಳನ್ನು ಆಲಿಸಿ ಅಭಿವೃದ್ಧಿಯತ್ತ, ಪಕ್ಷ ಸಂಘಟನೆಯತ್ತ ಗಮನಕೊಡಲಿ. ಮುಖ್ಯಮಂತ್ರಿ ಅಭ್ಯರ್ಥಿ ವಿಚಾರವಾಗಿ ಯಾರೂ ಮಾತನಾಡಬಾರದು. ಪಕ್ಷವನ್ನು ಅಧಿಕಾರಕ್ಕೆ ತರುವನಿಟ್ಟಿನಲ್ಲಿ ಮಾತ್ರ ಕೆಲಸ ಮಾಡಬೇಕು ಎಂದು ತಾಕೀತು ಮಾಡಿದರು.

ಪಕ್ಷಬಿಟ್ಟು ಹೋದವರು ಮರಳಿ ಪಕ್ಷಕ್ಕೆ ಬರಲು ಅವಕಾಶವಿದೆ. ಬಿಟ್ಟುಹೋದವರು ಮೊದಲು ಅರ್ಜಿ ಹಾಕಲಿ. ಅರ್ಜಿ ಹಾಕಿದರೆ ನಂತರ ಪರಿಶೀಲಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು