ಇತ್ತೀಚಿನ ಸುದ್ದಿ
ರಾಜ್ಯ ಸರಕಾರದ ‘ನಮ್ಮ ಕ್ಲಿನಿಕ್’ ಯೋಜನೆ: ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ನಾಳೆ 4 ಕ್ಲಿನಿಕ್ ಉದ್ಘಾಟನೆ
13/12/2022, 19:09

ಮಂಗಳೂರು(reporterkarnataka.com):
ನಗರ ಪ್ರದೇಶಗಳಲ್ಲಿ ಸಾರ್ವಜನಿಕರ ಸೇವೆಗಾಗಿ ರಾಜ್ಯ ಸರಕಾರವು ರೂಪಿಸಿರುವ ನಮ್ಮ ಕ್ಲಿನಿಕ್ ಯೋಜನೆಯಲ್ಲಿ ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ 4 ಕ್ಲಿನಿಕ್ ಗಳು ನಾಳೆ ಉದ್ಘಾಟನೆಗೊಳ್ಳಲಿದೆ. ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ.
ಗರ್ಭಿಣಿ ಹಾರೈಕೆ, ಶಿಶುವಿನ ಹಾರೈಕೆ, ಮಕ್ಕಳ ಸೇವೆ, ಕುಟುಂಬ ಕಲ್ಯಾಣ ಸೇವೆ, ಸಾಂಕ್ರಾಮಿಕ ರೋಗಗಳ ನಿರ್ವಹಣೆ, ಸಂಪೂರ್ಣ ಓಪಿಡಿ ಸೇವೆಗಳು, ಮಧುಮೇಹ, ರಕ್ತದೊತ್ತಡ ಚೆಕ್ ಅಪ್ ,ಕ್ಯಾನ್ಸರ್ ಸ್ಕ್ರೀನಿಂಗ್ ಸೇವೆ, ಬಾಯಿ ಆರೋಗ್ಯ ಸಮಸ್ಯೆಗಳು ಸೇವೆ, ಕಣ್ಣಿನ ತಪಾಸಣೆ, ಮೂಗು, ಗಂಟಲು ENT ಸೇವೆಗಳು, ಮಾನಸಿಕ ಆರೋಗ್ಯ ಸ್ಕ್ರೀನಿಂಗ್ ಸೇವೆ, ವೃದ್ಧಾಪ್ಯ ಆರೈಕೆ ಸೇರಿದಂತೆ ತುರ್ತು ವೈದ್ಯಕೀಯ ಸೇವೆ ಸೇರಿದಂತೆ ಒಟ್ಟು 12 ಪ್ರಮುಖ ಆರೋಗ್ಯ ಸೇವೆಗಳು ನಮ್ಮ ಕ್ಲಿನಿಕ್ ನಲ್ಲಿ ಲಭ್ಯವಿರಲಿದ್ದು, ಎಲ್ಲಾ ಸೇವೆಗಳು ಉಚಿತವಾಗಿ ಸಿಗಲಿದೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಈಗಾಗಲೇ ಗುರುತಿಸಿರುವಂತೆ ಮಂಗಳೂರು ನಗರ ದಕ್ಷಿಣ ವ್ಯಾಪ್ತಿಯ ಸುಂಕದಕಟ್ಟೆ, ಸೂಟರ್ ಪೇಟೆ, ಬೋಳೂರು ಹಾಗೂ ಹೈೂಗೆಬಜಾರ್ ಪ್ರದೇಶಗಳಲ್ಲಿ ನಾಳೆ ನಮ್ಮ ಕ್ಲಿನಿಕ್ ಉದ್ಘಾಟನೆಗೊಳ್ಳುತಿದೆ. ನಮ್ಮ ಸರಕಾರವು ಜನೋಪಯೋಗಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಹಿತಾಸಕ್ತಿ ಕಾಯುವ ಮಹತ್ತರವಾದ ಕಾರ್ಯ ಕೈಗೊಂಡಿದೆ. ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳುವಂತೆ ಶಾಸಕರು ಹೇಳಿದರು.