7:15 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಪಂಚಮ ಸಾಲಿ ಮೀಸಲಾತಿ: ಬೆಳಗಾವಿ ಸುವರ್ಣ ವಿಧಾನಸೌಧ ಎದುರುಗಡೆ ಬೃಹತ್ ಪ್ರತಿಭಟನೆಯ ಎಚ್ಚರಿಕೆ

15/12/2022, 14:53

ಬೆಳಗಾವಿ(reporterkarnataka.com): ರಾಜ್ಯ ಸರಕಾರ ನೀಡಿದ ಡಿಸೆಂಬರ್ 19ರ ಗಡುವಿನೊಳಗೆ ಮೀಸಲಾತಿ ಘೋಷಿಸದಿದ್ದರೆ ಬೆಳಗಾವಿಯ ಸುವರ್ಣ ವಿಧಾನ ಸೌಧ ಎದುರುಗಡೆ 25 ಲಕ್ಷಕ್ಕೂ ಹೆಚ್ಚು ಪಂಚಮಸಾಲಿಗರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ, ಹಾಲಿ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ.

ಸರ್ಕಾರವೇ ಕೊಟ್ಟ ಡಿಸೆಂಬರ್ 19ರ ಅಂತಿಮ ಗಡುವಿನೊಳಗಾಗಿ ಮೀಸಲಾತಿ ಘೋಷಿಸಬೇಕು. ಅದು ತಪ್ಪಿದರೆ ಬೆಳಗಾವಿ ಸುವರ್ಣ ವಿಧಾನಸೌಧದ ಎದುರುಗಡೆ ಡಿಸೆಂಬರ್ 22ರಂದು
ಬೆಳಿಗ್ಗೆ 10 ಕ್ಕೆ ನಿರ್ಣಾಯಕ ಹೋರಾಟ ನಡೆಸಲಾಗುವುದು.
ಮಾಡು ಇಲ್ಲವೇ , ಮೀಸಲಾತಿ ಪಡೆದು ಮಡಿ ಎಂಬ ಘೋಷ ವಾಕ್ಯದೊಂದಿಗೆ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.
ಲಕ್ಷಾಂತರ ಪಂಚಮ ಸಾಲಿಗಳಿಂದ ಐತಿಹಾಸಿಕ ವಿರಾಟ್ ಪಂಚಶಕ್ತಿ ಸಮಾವೇಶ ನಡೆಯಲಿದೆ. 19ರಿಂದ 22ರ ವರೆಗೆ ಸವದತ್ತಿಯ ಏಳುಕೊಳ್ಳದ ಗುಡ್ಡದಿಂದ ಬೆಳಗಾವಿಯ ಸುವರ್ಣ ವಿಧಾನಸೌಧವರೆಗೆ ಪಂಚಕೋಟಿ ಹೆಜ್ಜೆಗಳ ಬೃಹತ್ ಪಾದಯಾತ್ರೆ ನಡೆಯಲಿದೆ. ಬೆಳಗಾವಿಯಲ್ಲಿ ಜನಪ್ರತಿನಿಧಿಗಳ ಹಾಗೂ ಪದಾಧಿಕಾರಿಗಳ ರಾಜ್ಯ ಕಾರ್ಯಕಾರಿಣೀ ಸಭೆಯು ಈ ಹಿನ್ನೆಲೆಯಲ್ಲಿ ಡಿ. 12ರಂದು ಬೆಳಿಗ್ಗೆ 11ಕ್ಕೆ ಬೆಳಗಾವಿ
ಗಾಂಧಿಭವನದಲ್ಲಿ ಸಮಾವೇಶವ ನಡೆಸಲಾಯಿತು.
ರಾಷ್ಟ್ರೀಯ, ರಾಜ್ಯ ,ವಿವಿಧ ಘಟಕಗಳ ಜಿಲ್ಲಾ ,ತಾಲ್ಲೂಕು ,ನಗರ , ಗ್ರಾಮ ಘಟಕಗಳ ಪದಾಧಿಕಾರಿಗಳು, ಅಖಿಲ ಭಾರತ ಲಿಂಗಾಯತ ಪಂಚಮಸಾಲಿ, ಗೌಡ ಲಿಂಗಾಯತ,ಮಲೆಗೌಡ, ದೀಕ್ಷಾ ಲಿಂಗಾಯತ ಮಹಾಸಭಾ,ಪಂಚಮಸಾಲಿ ಮೀಸಲಾತಿ ಚಳುವಳಿ ಸಮಿತಿ, ಪಂಚಮಸಾಲಿ ವಿವಿಧ ಸಂಘಟನೆಗಳ ಘಟಕಗಳ ಪದಾಧಿಕಾರಿಗಳು ಆಗಮಿಸಿದ್ದರು ಎಂದು ಅವರು ವಿವರಿಸಿದರು.

ಪ್ರಥಮ ಜಗದ್ಗುರು ಬಸವ ಮೃತ್ಯುಂಜಯ ಸ್ವಾಮೀಜಿ ಸಾನಿಧ್ಯದಲ್ಲಿ ನಾವೆಲ್ಲರೂ 2020 ಅಕ್ಟೋಬರ್ 28 ರಿಂದ ನಮ್ಮ ಮಕ್ಕಳ ಭವಿಷ್ಯಕ್ಕಾಗಿ ನಿರಂತರವಾಗಿ 2ಎ ಮೀಸಲಾತಿ ಚಳುವಳಿ ಮಾಡುತ್ತಾ ರಾಜ್ಯ ಹಾಗೂ ದೇಶದ ಗಮನವನ್ನು ಸೆಳೆದಿದ್ದೆವೆ. ಅದರೆ ಇದುವರೆಗೂ ನ್ಯಾಯ ಸಿಕ್ಕಿಲ್ಲ. ಡಿಸೆಂಬರ್ 19ರ ಒಳಗಾಗಿ ಸರ್ಕಾರವು ಅಂತಿಮ ಗಡುವುನ್ನು ಪಡೆದುಕೊಂಡಿರುವುದರಿಂದ ಈ ಮೇಲಿನ ನಿರ್ಣಯವನ್ನು ಮಾಡಲಾಗಿದೆ ಎಂದರು.


ಈ ಸಭೆಯ ನೇತೃತ್ವವನ್ನು ಚಳುವಳಿಯ ಸ್ವಾಗತ ಸಮಿತಿಯ ಅಧ್ಯಕ್ಷರಾದ ಬಸವನಗೌಡ ಪಾಟೀಲ ಯಾತ್ನಳ್ ವಹಿಸಿದ್ದರು. ಮಾಜಿ ಸಚಿವ ಎ.ಬಿ. ಪಾಟೀಲ್, ಹಾಗೂ ಸಮಾವೇಶದ ಸ್ವಾಗತ ಸಮಿತಿಯ ಅಧ್ಯಕ್ಷರಾದ
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಶಾಸಕ ಮಹಾಂತೇಶ್ ದೊಡ್ಡಗೌಡ, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ಹುಕ್ಕೇರಿ , ಚನ್ನರಾಜ್ ಹಟ್ಟಿಹೋಳಿ, ಮಾಜಿ ಶಾಸಕರಾದ ವಿಶ್ವನಾಥ ಪಾಟೀಲ್ , ಮಾಜಿ ಸಚಿವ ಶಶಿಕಾಂತ ನಾಯಕ್ , ಆನಂದ ಮಾಮನಿ , ರಾಜ್ಯಸಭಾ ಸದಸ್ಯ ಹಾಗೂ ಸಮಾವೇಶದ ಸ್ವಾಗತ ಸಮಿತಿಯ ಕೋಶಧ್ಯಕ್ಷ ಈರಣ್ಣ ಕಡಾಡಿ, ಮೀಸಲಾತಿಗಾಗಿ ಪಾದಯಾತ್ರೆ ಸ್ವಾಗತ ಸಮಿತಿಯ ಮಹಾ ಪ್ರಧಾನ ಕಾರ್ಯದರ್ಶಿ ಎಚ್. ಎಸ್. ಶಿವಶಂಕರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು