11:31 PM Tuesday30 - December 2025
ಬ್ರೇಕಿಂಗ್ ನ್ಯೂಸ್
ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ

ಇತ್ತೀಚಿನ ಸುದ್ದಿ

ದತ್ತಪೀಠದ ರಸ್ತೆಯಲ್ಲಿ ಮೊಳೆ ಚೆಲ್ಲಿದ ಪ್ರಕರಣ: ಇಬ್ಬರು ದುಷ್ಕರ್ಮಿಗಳ ಬಂಧನ; ತಲೆ ಮರೆಸಿಕೊಂಡವರ ಪತ್ತೆಗೆ ವಿಶೇಷ ತಂಡ ರಚನೆ

16/12/2022, 10:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ದತ್ತಜಯಂತಿ ವೇಳೆ ದತ್ತಪೀಠದ ರಸ್ತೆಯಲ್ಲಿ ಮೊಳೆ ಹಾಕಿದ್ದ
ಇಬ್ಬರು ದುಷ್ಕರ್ಮಿಗಳನ್ನು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಮಹಮದ್ ಶಹಬಾಸ್ ಹಾಗೂ ವಾಹೀದ್ ಹುಸೇನ್ ಬಂಧಿತ ಆರೋಪಿಗಳು. ಬಂಧಿತರಿಬ್ಬರು ಚಿಕ್ಕಮಗಳೂರಿನ ದುಬೈ ನಗರದ ನಿವಾಸಿಗಳು ಎಂದು ತಿಳಿದು ಬಂದಿದೆ.

ಡಿಸೆಂಬರ್ 6-7-8 ರಂದು ನಡೆದಿದ್ದ ದತ್ತಜಯಂತಿ ಕಾರ್ಯಕ್ರಮ ವೇಳೆ ಈ ಕೃತ್ಯ ಎಸಗಲಾಗಿತ್ತು.ದತ್ತಜಯಂತಿಯ ಮೊದಲ ದಿನ ಮಹಿಳೆಯರು ಪೀಠಕ್ಕೆ ಹೋಗುವ ಮಾರ್ಗದಲ್ಲಿ ಮೊಳೆ ಚೆಲ್ಲಿದ್ದರು. ಪೊಲೀಸ್ ಸೇರಿದಂತೆ ನಾಲ್ಕೈದು ಗಾಡಿಗಳು ಪಂಚರ್ ಆಗಿ ರಸ್ತೆ ಮಧ್ಯೆ ನಿಂತಿದ್ದವು. ಹಾರ್ಡ್‍ವೇರ್ ಶಾಪ್‍ನಲ್ಲಿ 4 ಕೆ.ಜಿ. ಮೊಳೆಗಳನ್ನು ಖರೀದಿಸಿದ್ದ ಕಿಡಿಗೇಡಿಗಳು ರಸ್ತೆಯಲ್ಲಿ ಚೆಲ್ಲಿದ್ದರು.


ಮತ್ತಷ್ಟು ಆರೋಪಿಗಳಿಗಾಗಿ ಗ್ರಾಮಾಂತರ ಪೊಲೀಸರು ಬಲೆ ಬೀಸಿದ್ದಾರೆ. ತಲೆಮರೆಸಿಕೊಂಡಿರೋ ಆರೋಪಿಗಳ ಪತ್ತೆಗೆ ವಿಶೇಷ ತಂಡಗಳ ರಚನೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು