1:24 AM Tuesday21 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಕ್ರಿಕೆಟ್ ಜನಕರ ನಾಡಿನಲ್ಲಿ ಮೇರು ದಾಖಲೆ ಬರೆದು ರನ್ನುಗಳ ರಾಣಿಯಾದ ಮಿಥಾಲಿ ರಾಜ್

04/07/2021, 20:26

ನ್ಯೂಡೆಲ್ಲಿ( ReporterKarnataka.com)

ಅನುಭವಿ ಮಹಿಳಾ ಬ್ಯಾಟರ್‌ ಮಿಥಾಲಿ ರಾಜ್‌, ಇದೀಗ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರ್ತಿ ಎಂಬ ವಿಶ್ವ ದಾಖಲೆ ಬರೆದಿದ್ದಾರೆ.
38 ವರ್ಷದ ಅನುಭವಿ ಬಲಗೈ ಬ್ಯಾಟರ್‌ ಮಿಥಾಲಿ ರಾಜ್‌, ಶನಿವಾರ ನಡೆದ ಇಂಗ್ಲೆಂಡ್‌ ವಿರುದ್ದದ ಏಕದಿನ ಕ್ರಿಕೆಟ್‌ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಅಜೇತ ಅರ್ಧಶತಕ ಬಾರಿಸುವ ಮೂಲಕ ಭಾರತ ತಂಡಕ್ಕೆ 4 ವಿಕೆಟ್‌ಗಳ ಜಯ ತಂದುಕೊಟ್ಟರು.

ಸರಣಿಯ ಮೊದಲ ಎರಡೂ ಪಂದ್ಯಗಳಲ್ಲಿ ಭಾರತ ಸೋತರೂ ಮಿಥಾಲಿ ರಾಜ್ ತಂಡದ ಪರ ಅರ್ಧಶತಕಗಳನ್ನು ಬಾರಿಸಿದ್ದರು.
ಈ ಮೂಲಕ ಇಂಗ್ಲೆಂಡ್‌ನ ಚಾರ್ಲೊಟ್ ಎಡ್ವರ್ಡ್ಸ್‌ ಅವರ 10,273 ರನ್‌ಗಳ ದಾಖಲೆಯನ್ನು ಮುರಿದು ಅಗ್ರಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು