1:37 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಕಾಲೇಜು ಪ್ರಗತಿ ಹೊಂದ ಬೇಕಾದರೆ ನ್ಯಾಕ್ ನ ಮಾನ್ಯತೆ ಸಹಕಾರಿಯಾಗಿದೆ: ಶಾಸಕ ವೇದವ್ಯಾಸ್ ಕಾಮತ್

16/12/2022, 23:40

ಮಂಗಳೂರು(reporterkarnataka.com): ಕಾಲೇಜು ಪ್ರಗತಿ ಹೊಂದ ಬೇಕಾದರೆ ನ್ಯಾಕ್ ನ ಮಾನ್ಯತೆ ಅಗತ್ಯ ಮತ್ತು ಸಹಕಾರಿಯಾಗಿದೆ ಎಂದು ಶಾಸಕ‌ ಡಿ. ವೇದವ್ಯಾಸ್ ಕಾಮತ್ ಅಭಿಪ್ರಾಯಪಟ್ಟರು.

ನಗರದ ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ನಡೆದ ನ್ಯಾಕ್ ಕುರಿತು ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಶೈಕ್ಷಣಿಕ ಗುಣಮಟ್ಟವನ್ನು ಕಾಯ್ದುಕೊಳ್ಳಲು ಮತ್ತು ಹೆಚ್ಚಿಸಿಕೊಳ್ಳಲು ಕಾಲೇಜು ನ್ಯಾಕ್ ಪ್ರಕ್ರಿಯೆಗೆ ಒಳಪಡಬೇಕು‌. ಇದರಿಂದ ಸರಕಾರದಿಂದ ಹೆಚ್ಚಿನ ಅನುದಾನ ತರಲು ಸಹಕಾರಿಯಾಗಿದೆ. ಎಲ್ಲ ಅಧ್ಯಾಪಕರೂ ಜವಾಬ್ದಾರಿ ಹೆಚ್ಚಿಸಿಕೊಂಡು ಶ್ರಮಿಸಿ, ಹಳೆ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಆಹ್ವಾನ ನೀಡು ಕಾಲೇಜಿನ ಕುರಿತು ಸಕಾರಾತ್ಮಕ ಅಭಿಪ್ರಾಯಗಳನ್ನು ನ್ಯಾಕ್ ತಂಡದ ಮುಂದೆ ಹಂಚಿಕೊಳ್ಳಲು ತಿಳಿಸಿ ಎಂದರು.
ನ್ಯಾಕ್ ತಂಡ ಪರಿಶೀಲನೆಗೆ ಬಂದು ಹೋಗುವ ವರೆಗೂ ಎಲ್ಲರೂ ಒಟ್ಟಾಗಿ ಕಾರ್ಯ ನಿರ್ವಹಿಸಿ. ನಾವೆಲ್ಲರೂ ಜೊತೆಯಾಗಿ ಈ ಕೆಲಸ ಮಾಡೋಣ‌. ಮುಂದಿನ ದಿನಗಳಲ್ಲಿ ಕಾಲೇಜು ಎತ್ತರಕ್ಕೆ ಬೆಳೆಯಲಿ, ಸ್ನಾತಕೋತ್ತರ ಕೋರ್ಸ್ ಗಳನ್ನು ಆರಂಭಿಸಲು ಶಾಸಕರು ಕರೆ ನೀಡಿದರು‌. ಮುಂದಿನ ದಿನಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ನೆರವು ನೀಡುವ‌ ಭರವಸೆ ನೀಡಿದರು.

ಸಭೆಯಲ್ಲಿ ಸಿಡಿಸಿ ಸದಸ್ಯರಾದ ಮಂಜುನಾಥ್, IQAC ಸಂಚಾಲಕರಾದ ಡಾ. ಚಂದ್ರಶೇಖರ ಕೆ. ಸಹ ಸಂಚಾಲಕ ಡಾ. ನಯನ ಎಲ್.ಎಂ, ಡಾ. ಜಗದೀಶ್ ಬಾಳ, ಕಾಲೇಜಿನ ಎಲ್ಲಾ ಬೋಧಕ, ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು