2:36 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕೋಲಾರ: ಸ್ವಯಂಚಾಲಿತ ಸಮೂಹ ಹಾಲು ಕರೆಯುವ ಯಂತ್ರ ಘಟಕ ಉದ್ಘಾಟನೆ

19/12/2022, 21:27

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka.@gmail.com

ಶ್ರೀನಿವಾಸಪುರ ತಾಲ್ಲೂಕು ವ್ಯಾಪ್ತಿಯಲ್ಲಿ ನಂಬಿಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸ್ವಯಂ ಚಾಲಿತ ಸಮೂಹ ಹಾಲು ಕರೆಯುವ ಯಂತ್ರ ಘಟಕವನ್ನು ಕೋಮುಲ್ ತಾಲ್ಲೂಕು ನಿರ್ದೇಶಕರಾದ ಎನ್. ಹನುಮೇಶ್ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿ ಅವರು, ಸ್ವಯಂಚಾಲಿತ ಸಮೂಹ ಹಾಲು ಕರೆಯುವ ಯಂತ್ರ ಘಟಕದ ಯೂನಿಟ್ ದರ 2.5 ಲಕ್ಷ ಘಟಕವನ್ನು ಒಕ್ಕೂಟದಿಂದ ಶೇ .100 % ರಿಯಾಯತಿ ದರದಲ್ಲಿ ಸಂಘಗಳಿಗೆ ಸರಬರಾಜು ಮಾಡಿಸಿ , ಮಿಲ್ಕಿಂಗ್ ಕಟ್ಟಡ ನಿರ್ಮಾಣಕ್ಕಾಗಿ 50,000 / – ರೂಗಳ ಸಹಾಯಧನವನ್ನು ನೀಡಿರುತ್ತಾರೆ . ಇದರ ಜೊತೆಗೆ ಒಕ್ಕೂಟದಿಂದ ಪ್ರತಿ ಲೀಟರ್‌ಗೆ 0.30 ಪೈಸೆಯಂತೆ ಸಂಘಗಳಿಗೆ ಪ್ರೋತ್ಸಾಹಧನ ನೀಡುತ್ತಿದ್ದು , ಈ ಮೊತ್ತದಲ್ಲಿ ಪ್ರತಿ ಲೀಟರ್‌ಗೆ 0.10 ಪೈಸೆಯಂತೆ ಹಾಲು ಕರೆಯುವ ರೈತರಿಗೆ ಪ್ರೋತ್ಸಾಹ ಧನ ನೀಡಲಾಗುವುದು. ಉಳಿಕೆ 0.20 ಪೈಸೆ ಯಂತ್ರಗಳ ನಿರ್ವಹಣೆ ವೆಚ್ಚಕ್ಕಾಗಿ ವಿನಿಯೋಗಿಸಲು ಒಕ್ಕೂಟದಿಂದ ನೀಡಲಾಗುತ್ತಿದೆ .

ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂಚಾಲಿತ ಸಮೂಹ ಹಾಲು ಕರೆಯುವ ಯಂತ್ರ ಘಟಕಗಳನ್ನು ಸಂಘಗಳಲ್ಲಿ ಅಳವಡಿಸಲು ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿರುತ್ತಾರೆ .

ಉಪ ವ್ಯವಸ್ಥಾಪಕರಾದ ಕೆ.ಎಂ.ಮುನಿರಾಜು ಅವರು ಮಾತನಾಡಿ , ಗ್ರಾಮೀಣ ಪ್ರದೇಶಗಳಲ್ಲಿ ವಾಸವಿರುವ ಹಾಲು ಉತ್ಪಾದಕರು ಹೆಚ್ಚಿನ ಸಂಖ್ಯೆಯಲ್ಲಿ ರಾಸುಗಳನ್ನು ಸಾಕಾಣಿಕೆ ಮಾಡಿ ತಮ್ಮ ತಮ್ಮ ಆರ್ಥಿಕ ಜೀವನ ಮಟ್ಟವನ್ನು ಉತ್ತಮಪಡಿಸಿಕೊಳ್ಳಲು ಹಾಗೂ ಸ್ವಾವಲಂಬಿಗಳಾಗಿ ಜೀವನ ನಡೆಸಲು ಹಾರಿ ದೀಪವಾಗಿರುತ್ತದೆ ಹಾಗೂ ವೈಜ್ಞಾನಿಕವಾಗಿ ಸ್ವಯಂ ಚಾಲಿತ ಸಮೂಹ ಹಾಲು ಕರೆಯುವ ಯಂತ್ರ ಘಟಕಗಳಲ್ಲಿ ಹಾಲು ಕರೆಯುವ ವ್ಯವಸ್ಥೆ ಮಾಡಿರುವುದರಿಂದ ರಾಸುಗಳ ಆರೋಗ್ಯ , ಹಾಲಿನ ಗುಣಮಟ್ಟ , ಶುದ್ಧತೆ ಪರಿಣಾಮಕಾರಿಯಾಗಿ ಕಾಪಾಡಿ ಗ್ರಾಹಕರಿಗೆ ಪರಿಶುದ್ಧವಾದ ಹಾಲನ್ನು ಪೂರೈಕೆ ಮಾಡಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು .

ಈ ಸಂದರ್ಭದಲ್ಲಿ ಕೋಮುಲ್ ಮಾಜಿ ನಿರ್ದೇಶಕರು ದ್ವಾರಸಂದ್ರ ಸಿ.ಮುನಿವೆಂಕಟಪ್ಪ , ಕೇತಗಾನಹಳ್ಳಿ ನಾಗರಾಜ್ ರವರು , ಉಪ ವ್ಯವಸ್ಥಾಪಕರು ( ಬಿ.ಎಂ.ಸಿ . ಇಂಜಿನಿಯರಿಂಗ್ ) ಪಿ.ಮೋಹನ್ , ವಿಸ್ತರಣಾಧಿಕಾರಿಗಳಾದ ಪಿ.ಕೆ.ನರಸಿಂಹರಾಜು , ಎನ್.ಶಂಕರ್ , ಸಂಘದ ಅಧ್ಯಕ್ಷರಾದ ನರಸಿಂಹಮೂರ್ತಿ ಹಾಗೂ ಎಲ್ಲಾ ನಿರ್ದೇಶಕರು , ಹಾಲು ಉತ್ಪಾದಕರು , ಗ್ರಾಮಸ್ಥರು, ಸಂಘದ ಸಿಬ್ಬಂದಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು