4:22 AM Sunday10 - May 2026
ಬ್ರೇಕಿಂಗ್ ನ್ಯೂಸ್
ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಇನ್ನಿಲ್ಲ: ಅನಾರೋಗ್ಯದಿಂದ ನಿಧನ ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ

ಇತ್ತೀಚಿನ ಸುದ್ದಿ

ಮಂಗಳೂರಿನ ಕೆಪಿಟಿ ಮೈದಾನದಲ್ಲಿ 25ರಂದು ಭಂಡಾರಿ ಸಮಾಜದ ವಾರ್ಷಿಕ ಕ್ರೀಡಾಕೂಟ

21/12/2022, 20:12

ಮಂಗಳೂರು(reporterkarnataka.com): ಭಂಡಾರಿ ಸಮಾಜ ಬಂಧುಗಳ ವಾರ್ಷಿಕ ಕ್ರೀಡಾಕೂಟ ಡಿಸೆಂಬರ್ 25 ನೇ ಆದಿತ್ಯವಾರದಂದು ಮಂಗಳೂರಿನ ಕೆ.ಪಿ.ಟಿ. ಮೈದಾನದಲ್ಲಿ ಭಂಡಾರಿ ಸ್ವಯಂ ಸೇವಕ ಸಂಘದ ನೇತೃತ್ವದಲ್ಲಿ ನಡೆಯಲಿದೆ.

ರಾಷ್ಟ್ರ ಮಟ್ಟದ ಅಥ್ಲೆಟಿಕ್ ಚಾಂಪಿಯನ್ ಅನ್ವಿತಾ ಕೊಡವೂರು ಉಡುಪಿ ಕ್ರೀಡಾಜ್ಯೋತಿ ಪ್ರಜ್ವಲನೆ ಮಾಡಲಿದ್ದಾರೆ , ರಾಜ್ಯ ಮಟ್ಟದ ಕರಾಟೆ ಪಟು ಅನಘ ಭಂಡಾರಿ ಪ್ರತಿಜ್ಞಾ ಸ್ವೀಕರಿಸಿ , ಸಂಘದ ಅಧ್ಯಕ್ಷೆ ಬಬಿತಾ ಲತೀಶ್ ಅಧ್ಯಕ್ಷತೆ ವಹಿಸಿಲಿದ್ದಾರೆ , ಭಂಡಾರಿ ಯುವ ವೇದಿಕೆಯ ಮಾಜಿ ಅಧ್ಯಕ್ಷ ಕೃಷ್ಣಾನಂದ ಭಂಡಾರಿ ಧ್ವಜಾರೋಹಣ ಮಾಡಿ , ಎ.ಜೆ.ಆಸ್ಪತ್ರೆ ಮಂಗಳೂರು ಐ.ಎಂ.ಎಸ್.ತುರ್ತು ಚಿಕಿತ್ಸಾ ವಿಭಾಗದ ಮೇಲ್ವಿಚಾರಕಿ ಲೀಲಾವತಿ ಭಾಸ್ಕರ್ ಭಂಡಾರಿ ಕೋಡಿಕಲ್ ಮುಖ್ಯ ಅತಿಥಿಯಾಗಿ ಅಗಮಿಸಲಿದ್ದಾರೆ. ಕ್ರಿಕೆಟ್, ತ್ರೋಬಾಲ್, ವಾಲಿಬಾಲ್ ,
ಹಗ್ಗಜಗ್ಗಾಟ,ಆಟೋಟ ಸ್ವರ್ಧೆಗಳು ಮಡಕೆ ಒಡೆಯುವುದು ಇನ್ನಿತರ ಸ್ವರ್ಧೆಗಳು ಹಾಗೂ ಭಂಡಾರಿ ಸಮಾಜದ ವಧು – ವರರ ನೊಂದಾವಣೆ ನಡೆಯಲಿದೆ.

ಅಂದು ಸಾಯಂಕಾಲ ನಡೆಯುವ ಸಮಾರೋಪ ಸಮಾರಂಭ ಬಹುಮಾನ ವಿತರಣೆಯ ಮುಖ್ಯ ಅತಿಥಿಗಳಾಗಿ ಭಂಡಾರಿ ಮಹಾಮಂಡಳದ ಅಧ್ಯಕ್ಷ ಸದಾಶಿವ ಭಂಡಾರಿ ಸಕಲೇಶಪುರ,ಬೆಂಗಳೂರು ಡಿಜಿಎಸ್ . ಜಿಐಎಮ್ಎಸ್.ಆಸ್ಪತ್ರೆಯ ಸಹಾಯಕ ಪ್ರೊಫೆಸರ್ ಡಾ॥ ರೋಹನ್ ಪಿ.ಜೆ.ಭಂಡಾರಿ , ಉಡುಪಿ ಪ್ರೊಬೆಷನರಿ ಸಬ್ಇನ್ಸ್ ಪೆಕ್ಟರ್ ನಿಧಿ ಬಿ.ಎನ್., ಉಡುಪಿ ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಗುರುದಾಸ್ ಭಂಡಾರಿ ಹಿರೇಬೆಟ್ಟು , ಬೆಳ್ತಂಗಡಿ ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಉಮೇಶ್ ಭಂಡಾರಿ ಉಜಿರೆ , ರಾಷ್ಟ್ರ ಮಟ್ಟದ ದೇಹದಾರ್ಡ್ಯ ಪಟು ಯಶಸ್ವಿನಿ ವಿ.ಭಂಡಾರಿ , ಮಂಗಳೂರು ಭಂಡಾರಿ ಸಮಾಜ ಸಂಘದ ಅಧ್ಯಕ್ಷ ರಮಾನಾಥ ಭಂಡಾರಿ ಮತ್ತು ಮಂಗಳೂರು ಭಂಡಾರಿ ಯುವ ವೇದಿಕೆಯ ಅಧ್ಯಕ್ಷ ನಿತ್ಯಾನಂದ ಭಂಡಾರಿ ಆಗಮಿಸಲಿದ್ದಾರೆ ಎಂದು ಸಂಘದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು